ಇಂಗ್ಲೆಂಡ್ ಸರಣಿಗಿಲ್ಲ KL ರಾಹುಲ್ – ಚಾಂಪಿಯನ್ಸ್ ಟ್ರೋಫಿಗೆ ಸೆಲೆಕ್ಟ್ ಆಗಲ್ವಾ?

ಇಂಗ್ಲೆಂಡ್ ಸರಣಿಗಿಲ್ಲ KL ರಾಹುಲ್  – ಚಾಂಪಿಯನ್ಸ್ ಟ್ರೋಫಿಗೆ ಸೆಲೆಕ್ಟ್ ಆಗಲ್ವಾ?

ಬಹು ನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಫೆಬ್ರವರಿ 19ರಿಂದ ಶುರುವಾಗಲಿದೆ. ಅದಕ್ಕೂ ಮುನ್ನ ಟೀಂ ಇಂಡಿಯಾ ತವರಿನಲ್ಲೇ ಇಂಗ್ಲೆಂಡ್ ವಿರುದ್ಧದ ಸರಣಿಗಳನ್ನ ಆಡ್ಬೇಕಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಯು ಜನವರಿ 22 ರಿಂದ ಆರಂಭವಾಗಲಿದ್ದು, ಫೆಬ್ರವರಿ 2 ರವರೆಗೆ ನಡೆಯಲಿದೆ. ಟಿ20 ಸರಣಿಯ ಬಳಿಕ ಉಭಯ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿಯೂ ನಡೆಯಲಿದೆ. ಇದೀಗ ಇಂಗ್ಲೆಂಡ್ ವಿರುದ್ಧದ ವೈಟ್ ಬಾಲ್ ಸರಣಿಯಿಂದ ಕನ್ನಡಿಗ ಕೆಎಲ್ ರಾಹುಲ್ ಹೊರಗುಳಿಯೋ ಸುದ್ದಿ ಹೊರ ಬಿದ್ದಿದೆ.

ಇದನ್ನೂ ಓದಿ : ಟೀಂ ಹಾಳು ಮಾಡಿದ್ದೇ BCCI – ಸಚಿನ್ ಗಿದ್ದ ಶ್ರದ್ಧೆ ರೋಹಿತ್, ಕೊಹ್ಲಿ, ರಾಹುಲ್ ಗೆ ಇಲ್ವಾ?

ಇಂಗ್ಲೆಂಡ್ ವಿರುದ್ಧದ ಸರಣಿಗೆ ಇನ್ನು ಎರಡ್ಮೂರು ದಿನಗಳಲ್ಲಿ ಟೀಂ ಇಂಡಿಯಾ ಸ್ಕ್ವಾಡ್ ಅನೌನ್ಸ್ ಆಗಲಿದೆ.   ಆದರೆ ಅದಕ್ಕೂ ಮುನ್ನವೇ ತಂಡಕ್ಕೆ ಯಾರೆಲ್ಲಾ ಆಯ್ಕೆಯಾಗಬಹುದು. ಯಾರನ್ನ ಕೈಬಿಡಬಹುದು ಅನ್ನೋ ಬಗ್ಗೆ ಮಾಹಿತಿ ಹೊರಬಿದ್ದಿದೆ. ಆಘಾತಕಾರಿ ವಿಷ್ಯ ಏನಪ್ಪ ಅಂದ್ರೆ ತಂಡದ ಸ್ಟಾರ್ ವಿಕೆಟ್​ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್​ಗೆ ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿ ಟೀಂ ಇಂಡಿಯಾಕ್ಕೆ ಚಾಂಪಿಯನ್ಸ್ ಟ್ರೋಫಿಯ ತಯಾರಿಗೆ ಅತ್ಯಂತ ಮಹತ್ವದ್ದಾಗಿದೆ. ಯಾರೆಲ್ಲಾ ಆಯ್ಕೆಯಾಗಬಹುದು ಯಾರು ಡ್ರಾಪ್ ಆಗಬಹುದು ಅನ್ನೋ ಚರ್ಚೆ ನಡುವೆ ಕನ್ನಡಿಗ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿರುವ ತಂಡದಲ್ಲಿ ರಾಹುಲ್​ಗೆ ಸ್ಥಾನ ಸಿಗಲಿದೆ ಎಂದು ಆಯ್ಕೆ ಸಮಿತಿ ಭರವಸೆ ನೀಡಿದೆ. ಇದರರ್ಥ ರಾಹುಲ್ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿ ಮತ್ತು ಏಕದಿನ ಸರಣಿಯನ್ನು ಆಡದೆ ಚಾಂಪಿಯನ್ಸ್ ಟ್ರೋಫಿಗೆ ಕಾಲಿಡಲಿದ್ದಾರೆ.  ಆದ್ರೆ  ಚಾಂಪಿಯನ್ಸ್ ಟ್ರೋಫಿಗೆ ಮುನ್ನ ನಡೆಯುವ ಏಕದಿನ ಸರಣಿಯಿಂದ ರಾಹುಲ್​ಗೆ ವಿಶ್ರಾಂತಿ ನೀಡುವ ನಿರ್ಧಾರ ಸರಿನಾ ಎನ್ನುವ ಪ್ರಶ್ನೆ ಮೂಡಿಸಿದೆ. ಯಾಕಂದ್ರೆ ಟೀಂ ಇಂಡಿಯಾ ಈಗಾಗಲೇ ಆಸ್ಟ್ರೇಲಿಯಾದಿಂದ ವಾಪಸಾಗಿದ್ದು, ಫೆಬ್ರವರಿ 6 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ರಾಹುಲ್​ಗೆ ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯವಿದೆ. ಹೀಗಿದ್ರೂ ವಿಶ್ರಾಂತಿಯ ಅಗತ್ಯವಿತ್ತಾ ಅನ್ನೋ ಪ್ರಶ್ನೆ ಮೂಡಿದೆ.   ಚಾಂಪಿಯನ್ಸ್ ಟ್ರೋಫಿಯಂತಹ ದೊಡ್ಡ ಟೂರ್ನಿಗೆ ಯಾವುದೇ ಪೂರ್ವಸಿದ್ಧತೆ ಇಲ್ಲದೆ ಪ್ರವೇಶಿಸುವುದು ರಾಹುಲ್ ಅವರ ಮೇಲೆ ಒತ್ತಡವನ್ನುಂಟು ಮಾಡಬಹುದು. ಏಕೆಂದರೆ ಒಂದು ವೇಳೆ ಟೂರ್ನಿಯಲ್ಲಿ ರಾಹುಲ್ ಕಳಪೆ ಪ್ರದರ್ಶನ ನೀಡಿದರೆ ಅದು ಅವರಿಗೆ ಮಾತ್ರವಲ್ಲದೆ ತಂಡದ ಮೇಲೆಯೂ ಪರಿಣಾಮ ಬೀರಲಿದೆ.

ಕೆಎಲ್ ರಾಹುಲ್​ಗೆ ಆಯ್ಕೆ ಮಂಡಳಿ ವಿಶ್ರಾಂತಿ ನೀಡಲು ಕಾರಣವೂ ಇದೆ. ರಾಹುಲ್ ಅವರ ಪತ್ನಿ ಅಥಿಯಾ ಶೆಟ್ಟಿ ಪ್ರಗ್ನೆಂಟ್ ಆಗಿದ್ದು, ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಹೀಗಾಗಿ ರಾಹುಲ್ ಬಿಸಿಸಿಐನಿಂದ ವಿರಾಮ ಕೇಳಿರುವ ಸಾಧ್ಯತೆಯೂ ಇದೆ. ರಾಹುಲ್ ಮತ್ತು ಅಥಿಯಾ ಮೊದಲ ಮಗುವಿನ ನಿರೀಕ್ಷೆಯಲಿದ್ದು, ಈ ವಿಶೇಷ ಸಂದರ್ಭದಲ್ಲಿ ಕುಟುಂಬದೊಂದಿಗೆ ಇರಲು ರಾಹುಲ್ ಬಯಸಿರುವ ಸಾಧ್ಯತೆಯಿದೆ. ಆದ್ದರಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. 2023 ರ ವಿಶ್ವಕಪ್‌ನಲ್ಲಿ ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದ ಕಾರಣದಿಂದ ಆಯ್ಕೆ ಸಮಿತಿಯು ಈಗಾಗಲೇ ರಾಹುಲ್ ಅವರನ್ನು ಮುಖ್ಯ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲು ನಿರ್ಧರಿಸಿದೆ. ಆದ್ರೆ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಅವ್ರನ್ನೂ ಪರಿಗಣಿಸೋ ಸಾಧ್ಯತೆ ಇದೆ.

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ನಿರಾಸೆ ಮೂಡಿಸಿದ್ರು. ಅಂದ್ರೆ ಇರೋ ಆಟಗಾರರ ಪೈಕಿ ಬೆಟರ್ ಅನ್ಸಿದ್ರು. 10 ಇನ್ನಿಂಗ್ಸ್‌ಗಳಲ್ಲಿ 30.66 ಸರಾಸರಿಯಲ್ಲಿ 276 ರನ್ ಗಳಿಸುವ ಮೂಲಕ ಭಾರತದ ಪರ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಇದೀಗ ಸೀಮಿತ ಓವರ್‌ಗಳ ತಂಡದಲ್ಲಿ ಸ್ಥಾನ ಪಡೆಯಲು ಕೆಎಲ್ ರಾಹುಲ್ ವಿಕೆಟ್‌ಕೀಪರ್- ಬ್ಯಾಟರ್‌ಗಳಾದ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಅವರೊಂದಿಗೆ ಪೈಪೋಟಿ ನಡೆಸಬೇಕಾಗಿದೆ. ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಯಾರಾಗಲಿದ್ದಾರೆ ಎಂಬ ಸಸ್ಪೆನ್ಸ್ ಕೂಡ ಇದೆ.

Shantha Kumari

Leave a Reply

Your email address will not be published. Required fields are marked *