ಕಿವೀಸ್ ಎದುರು ಒಂದೂ ವಿಕೆಟ್ ಪಡೆದ ರವೀಂದ್ರ ಜಡೇಜಾ – ಟೀಂ ಇಂಡಿಯಾ ಆಲ್ರೌಂಡರ್ ವೃತ್ತಿ ಬದುಕು ಮುಗಿಯಿತಾ?

ಕಿವೀಸ್ ಎದುರು ಒಂದೂ ವಿಕೆಟ್ ಪಡೆದ ರವೀಂದ್ರ ಜಡೇಜಾ – ಟೀಂ ಇಂಡಿಯಾ ಆಲ್ರೌಂಡರ್ ವೃತ್ತಿ ಬದುಕು ಮುಗಿಯಿತಾ?

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಬೌಲರ್‌ಗಳ ಪ್ರದರ್ಶನದ ಬಗ್ಗೆ ಅಸಮಾಧಾನ ಎದ್ದಿದೆ. ಅದರಲ್ಲೂ ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಚರ್ಚೆ ಶುರುವಾಗಿದೆ. ಜಡ್ಡು ಕ್ರಿಕೆಟ್ ವೃತ್ತಿಜೀವನ ಮುಗಿಯಿತಾ ಎನ್ನುವ ಪ್ರಶ್ನೆಗಳು ಎದ್ದಿವೆ.

ಇದನ್ನೂ ಓದಿ:ಪ್ಲೇ ಆಫ್ ಗೆ ಲಗ್ಗೆ ಇಟ್ಟ RCB – ಸೋಲಿಲ್ಲದ ಸಿಂಹಿಣಿಯರೇ ಸ್ಟ್ರಾಂಗ್ 

ನ್ಯೂಜಿಲೆಂಡ್ ವಿರುದ್ಧ ಸರಣಿ ಸೋತ ಬಳಿಕ ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ವೃತ್ತಿಜೀವನದ ಬಗ್ಗೆ ಚರ್ಚೆ ಜೋರಾಗಿದೆ. ಜಡೇಜಾ ಕಳಪೆ ಪ್ರದರ್ಶನವೇ ತಂಡದ ಸೋಲಿಗೆ ಕಾರಣ ಎನ್ನಲಾಗುತ್ತಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್, ಕಳಪೆ ಪ್ರದರ್ಶನ ತೋರುತ್ತಿರುವ ರವೀಂದ್ರ ಜಡೇಜಾಗೆ ಮತ್ತೆ ಮತ್ತೆ ಅವಕಾಶ ನೀಡುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ಕ್ರಿಕೆಟ್ ಪಂಡಿತರು ಕೂಡಾ ಕಿವೀಸ್ ವಿರುದ್ಧ ಜಡ್ಡು ಕಳಪೆ ಪ್ರದರ್ಶನದ ಬಗ್ಗೆ ಮಾತಾಡುತ್ತಿದ್ದಾರೆ. ಕಿವೀಸ್ ವಿರುದ್ಧ ಒಂದೇ ಒಂದು ವಿಕೆಟ್ ಕೀಳಲು ಜಡೇಜಾಗೆ ಸಾಧ್ಯವಾಗಿರಲಿಲ್ಲ. ಇದು ಕೂಡಾ ಇವರ ವೃತ್ತಿ ಬದುಕಿನ ಬಗ್ಗೆ ಪ್ರಶ್ನೆ ಮೂಡಲು ಕಾರಣವಾಗಿದೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಒಟ್ಟು 6 ಏಕದಿನ ಪಂದ್ಯಗಳಲ್ಲಿ ಜಡೇಜಾ ಕಳಪೆ ಪ್ರದರ್ಶನ ನೀಡಿದ್ದಾರೆ. ಈ 6 ಪಂದ್ಯಗಳಲ್ಲಿ ಅವರು ಕೇವಲ 1 ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್‌ನಲ್ಲೂ ನಿರಾಸೆ ಮೂಡಿಸಿದ್ದು, ಕ್ರಮವಾಗಿ 32, 24*, 4, 27, 12 ರನ್ ಮಾತ್ರ ಗಳಿಸಿದ್ದರು. ನ್ಯೂಜಿಲೆಂಡ್ ಸರಣಿಯ ಮೂರು ಪಂದ್ಯಗಳಲ್ಲಿ ರವೀಂದ್ರ ಜಡೇಜಾ ಒಂದೂ ವಿಕೆಟ್ ಪಡೆಯಲಿಲ್ಲ. ನಿರ್ಣಾಯಕ ಪಂದ್ಯದಲ್ಲಿ ಕೇವಲ 12 ರನ್ ಗಳಿಸಿ ಔಟಾದರು. ಜಡೇಜಾ ಈಗಾಗಲೇ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ. ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಏಕದಿನ ಪಂದ್ಯಗಳಲ್ಲಿ ಅವರ ಪ್ರದರ್ಶನ ತೀರಾ ಕಳಪೆಯಾಗಿದೆ. ಇದು ತಂಡಕ್ಕೆ ಹೊರೆಯಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ.

Sulekha