ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? – ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? – ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಒಂದಲ್ಲ ಒಂದು ವಿಚಾರಕ್ಕೆ ಕಿಡಿಕಾರುತ್ತಲೇ ಬಂದಿದೆ. ಇದೀಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಆದರೂ ಇದುವರೆಗೆ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರು 2 ನೇ ವಿವಾಹವಾಗುವಂತಿಲ್ಲ! – ಬಹುಪತ್ನಿತ್ವ ಹೊಂದಿದ್ದರೆ ಭಾರಿ ದಂಡ!

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಕನ್ನಡಿಗರಿಗೆ ಬೆದರಿಕೆ ಹಾಕಿದ್ದರು. ಈಗ ಅದರ ಫಲಿತಾಂಶವನ್ನು ನಾವು ನೋಡುತ್ತಿದ್ದೇವೆ. ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಮತ್ತು ಕೇಂದ್ರ ಸಚಿವರು ಏಕೆ ಮೌನವಾಗಿದ್ದಾರೆ? ಇದಕ್ಕೆ ಕನ್ನಡಿಗರ ಮೇಲಿನ ದ್ವೇಷ ಕಾರಣವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

Shwetha M