ಎನ್ಇಪಿ ಬದಲಿಗೆ ಹೊಸ ಶಿಕ್ಷಣ ನೀತಿ ರಚಿಸಲು ಮುಂದಾಗಿದ್ಯಾ ರಾಜ್ಯ ಸರ್ಕಾರ? – ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಎನ್ಇಪಿ ಬದಲಿಗೆ ಹೊಸ ಶಿಕ್ಷಣ ನೀತಿ ರಚಿಸಲು ಮುಂದಾಗಿದ್ಯಾ ರಾಜ್ಯ ಸರ್ಕಾರ? – ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಪಡಿಸುವ ಮೂಲಕ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೆ ತರಲಿದೆಯಾ ಅನ್ನುವ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಕಾರಣ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಹೇಳಿಕೆ. ಎನ್‌ ಇಪಿಯನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ, ಬದಲಾಗಿ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ ಮುಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಟ್ಟ ಬೇಡಿಕೆಗಳೇನು?

ಈ ಬಗ್ಗೆ ಮಾತನಾಡಿರುವ ಡಿಕೆಶಿ, ನಾನು ಕೂಡ ನನ್ನಾಯ್ಕೆಯಂತೆ ಶಿಕ್ಷಣ ತಜ್ಞ. ನಾನು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇನೆ ಮತ್ತು ವಿವಿಧ ಸಂಸ್ಥೆಗಳಲ್ಲಿ ಟ್ರಸ್ಟಿ ಅಥವಾ ಅಧ್ಯಕ್ಷ ಹುದ್ದೆಯಲ್ಲಿದ್ದೇನೆ. ನನಗೆ ಎನ್‌ಇಪಿ ಅರ್ಥವಾಗುತ್ತಿಲ್ಲ. ಎರಡು ಅಥವಾ ಮೂರು ಬಾರಿ ಅಧ್ಯಯನ ಮಾಡಲು ಮತ್ತು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ. ಆದರೆ ವಿಫಲನಾದೆ’ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿದರೂ ಎನ್‌ಇಪಿಯ ಸಾರವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಎನ್‌ಇಪಿಯನ್ನು ಹಿಂಪಡೆದುಕೊಳ್ಳಲು ಒತ್ತಾಯಿಸಿದ್ದರು ಮತ್ತು ವಿದ್ಯಾರ್ಥಿಗಳಿಗೆ ಕೋಮುವಾದದ ವಿಷಯಗಳನ್ನು ಕಲಿಸುವುದು ಎನ್‌ಇಪಿಯ ಉದ್ದೇಶವಾಗಿದೆ. ಎನ್‌ಇಪಿ ರಾಜ್ಯದ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿ ಸಮುದಾಯದ ಪಠ್ಯಕ್ರಮಕ್ಕೆ ಸೇರ್ಪಡೆಗೊಂಡಿರುವ ಎಲ್ಲಾ ಹೊಸ ವಿಚಾರಗಳನ್ನು ತೆಗೆದುಹಾಕುವ ಗುರಿಯನ್ನು ಕಾಂಗ್ರೆಸ್ ಸರ್ಕಾರ ಹೊಂದಿದೆ. ಹೊಸ ನೀತಿಯು ನೆಲದ ಆದ್ಯತೆಗಳು ಮತ್ತು ಅಗತ್ಯತೆಗಳನ್ನು ಪ್ರತಿಬಿಂಬಿಸುತ್ತದೆ  ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿವೆ. ಶಿವಕುಮಾರ್ ಕೂಡ ಈ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತರಲು ಸುಮಾರು ಮೂರು ವರ್ಷ ತೆಗೆದುಕೊಂಡಿದೆ. ಯು.ಆರ್. ರಾವ್ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ ಮತ್ತು ಎಲ್ಲಾ ರಾಜ್ಯಗಳಿಂದ ಒಪ್ಪಿಗೆ ಪಡೆಯಲಾಗಿದೆ. ಅನುಷ್ಠಾನದ ಮೊದಲು, ಕಾರ್ಯಪಡೆಯನ್ನು ರಚಿಸಲಾಯಿತು ಮತ್ತು ನಂತರ ಅದನ್ನು ಉನ್ನತ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಅಳವಡಿಸಲಾಯಿತು ಎಂದು ಸಮರ್ಥಿಸಿಕೊಂಡಿದ್ದಾರೆ.

suddiyaana