ವಿಜಯ ಹಝಾರೆ ಟೂರ್ನಿಯಲ್ಲಿ ಇಶಾನ್ ಕಿಶನ್ ಸಿಡಿಲಬ್ಬ -33 ಎಸೆತಗಳಲ್ಲಿ ಭರ್ಜರಿ ಶತಕ

ವಿಜಯ ಹಝಾರೆ ಟೂರ್ನಿಯಲ್ಲಿ ಇಶಾನ್ ಕಿಶನ್ ಸಿಡಿಲಬ್ಬ -33 ಎಸೆತಗಳಲ್ಲಿ ಭರ್ಜರಿ ಶತಕ

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಎಡಗೈ ದಾಂಡಿಗ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಶತಕ ಬಾರಿಸಿದ್ದು, ಕರ್ನಾಟಕ ತಂಡಕ್ಕೆ ಜಾರ್ಖಂಡ್ 413 ರನ್​ಗಳ ಗುರಿ ನೀಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕಿಶನ್  ಕೇವಲ 33 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ವಿಜಯ ಹಝಾರೆ ಟೂರ್ನಿಯಲ್ಲಿ ಮೂಡಿಬಂದ 2ನೇ ವೇಗದ ಸೆಂಚುರಿಯಾಗಿದೆ.

ದೇಶೀಯ ಟೂರ್ನಿಯಲ್ಲಿ ಇಶಾನ್ ಕಿಶನ್  ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ್ದ ಇಶಾನ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಸ್ಫೋಟಕ ಶತಕ ಬಾರಿಸಿದ್ದಾರೆ.

ಇದನ್ನೂ ಓದಿ: ವಿಜಯ್ ಹಜಾರೆ ಟ್ರೋಫಿಯಲ್ಲಿ ವೈಭವದ ಶತಕ – 36 ಎಸೆತಗಳಲ್ಲಿ ಶತಕ ಸಿಡಿಸಿದ ಸೂರ್ಯವಂಶಿ

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಜಾರ್ಖಂಡ್ ಪರ ನಾಯಕ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಎದುರಿಸಿದ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದರು. ಈ ಮೂಲಕ ಕರ್ನಾಟಕ ಬೌಲರ್​ಗಳ ಬೆಂಡೆತ್ತಿದ ಯುವ ಎಡಗೈ ದಾಂಡಿಗ ಕೇವಲ 33 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ವಿಜಯ ಹಝಾರೆ ಟೂರ್ನಿಯಲ್ಲಿ ಮೂಡಿಬಂದ 2ನೇ ವೇಗದ ಸೆಂಚುರಿ ಎಂಬುದು ವಿಶೇಷ. ಇದಕ್ಕೂ ಮುನ್ನ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಬಿಹಾರ ತಂಡದ ನಾಯಕ ಸಕಿಬುಲ್ ಗನಿ 32 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ 32 ಎಸೆತಗಳ ಮೂಲಕ ಸೆಂಚುರಿ ಪೂರೈಸಿ ಇಶಾನ್ ಕಿಶನ್ ಲಿಸ್ಟ್​ ಎ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.

Kishor KV