ಆರ್‌ಸಿಬಿ ವಿರುದ್ಧ ಗುಡುಗಿದ ಇಶಾನ್ ಕಿಶನ್ – ಹೈದರಾಬಾದ್ ನಾಯಕನಾಗಿ ಬೊಂಬಾಟ್ ಬ್ಯಾಟಿಂಗ್

2026ರ ಇಂಡಿಯನ್ ಪ್ರೀಮಿಯರ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 201 ರನ್ಗಳ ಬೃಹತ್ ಮೊತ್ತ ದಾಖಲಿಸಲು ಕಾರಣ ನಾಯಕ ಇಶಾನ್ ಕಿಶನ್. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರು ಇಶಾನ್ ಕಿಶನ್ ಅಬ್ಬರ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ:CSK ಫ್ಯಾನ್ಸ್ ಗೀಗ ತಲಾ ತಲೆಬಿಸಿ – RCB ವಿರುದ್ಧ ಆಡಲ್ಲ ಧೋನಿ
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್ಗಳಿಸಿತು. ನಾಯಕ ಇಶಾನ್ ಕಿಶನ್ ಆಟವಂತೂ ಬೊಂಬಾಟ್ ಆಗಿತ್ತು. ಟಾಸ್ ಗೆದ್ದ ಆರ್‌ಸಿಬಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಬ್ಯಾಟಿಂಗ್ ಆಹ್ವಾನಿಸಿತು. ಆದರೆ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಇಂದೇ ಆರ್‌ಸಿಬಿ ಪರ ಪದಾರ್ಪಣೆ ಮಾಡಿದ ಜೇಕಬ್ ಡಫಿ ಪವರ್ ಪ್ಲೇನಲ್ಲೇ ಮೂರು ವಿಕೆಟ್ ಪಡೆದು ಆಘಾತ ನೀಡಿದರು. ಸ್ಫೋಟಕ ಬ್ಯಾಟರ್ಗಳಾದ ಅಭಿಷೇಕ್ ಶರ್ಮಾ ಕೇವಲ 7 ರನ್‌ಗೆ ಔಟಾದರು. ಜೊತೆಗೆ ಟ್ರಾವಿಸ್ ಹೆಡ್ ಕೂಡಾ 11 ರನ್‌ಗೆ ಔಟಾದರು. ನಿತೀಶ್ ಕುಮಾರ್ ರೆಡ್ಡಿ ಕೂಡಾ ಪೆವಿಲಿಯನ್‌ಗೆ ಮರಳಿದರು. ಆಗಲೇ ಶುರುವಾಗಿದ್ದು ಇಶಾನ್ ಕಿಶನ್ ಆಟ. 4ನೇ ವಿಕೆಟ್ ಜೊತೆಯಾಟದಲ್ಲಿ ಒಂದಾದ ಇಶಾನ್ ಕಿಶನ್ ಹಾಗೂ ಹೆನ್ರಿಚ್ ಕ್ಲಾಸೆನ್ 97 ರನ್ಗಳಿಸಿ ಚೇತರಿಕೆ ನೀಡಿದರು. ಸ್ಫೋಟಕ ಬ್ಯಾಟಿಂಗ್ ಮಾಡಿದ ನಾಯಕ ಇಶಾನ್ ಕಿಶನ್ 38 ಎಸೆತಗಳಲ್ಲಿ 8 ಬೌಂಡರಿ, 5 ಸಿಕ್ಸರ್ಗಳ ಸಹಿತ 80 ರನ್ಗಳಿಸಿದರು. ಶತಕದತ್ತ ಮುನ್ನುಗ್ಗುತ್ತಿದ್ದ ಕಿಶನ್ರನ್ನ ಪದಾರ್ಪಣೆ ಬೌಲರ್ ಅಭಿನಂದನ್ ಸಿಂಗ್ ಪೆವಿಲಿಯನ್ ಗೆ ಅಟ್ಟಿದರು. ಅಂತೂ ನಾಯಕನಾಗಿ ಇಶಾನ್ ಕಿಶನ್ ಅಬ್ಬರಿಸಿದ್ದಾರೆ. ಆದರೆ, ಮೊದಲ ಪಂದ್ಯದಲ್ಲೇ ಆರ್‌ಸಿಬಿಗೆ ಹೈದ್ರಾಬಾದ್ ತಂಡ ಶರಣಾಯ್ತು.

ನೋಡಿರಿ

