ಗಾಜಾ ಸುರಂಗಗಳಲ್ಲಿ ಮಹಾ ಪ್ರವಾಹ ಸೃಷ್ಟಿಸಲು ಪ್ಲ್ಯಾನ್ ಮಾಡ್ತಿದ್ಯಾ ಇಸ್ರೇಲ್ ಸೇನೆ?

ಇಸ್ರೇಲ್ ಹಾಗೂ ಹಮಾಸ್ ನಡುವಿನ ದಾಳಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಎರಡೂ ರಾಷ್ಟ್ರಗಳ ಸೇನೆಗಳು ತಂತ್ರ – ಪ್ರತಿತಂತ್ರ ನಡೆಸುತ್ತಲೇ ಇವೆ. ಹಮಾಸ್ ಬಂಡುಕೋರರನ್ನು ನಿರ್ನಾಮ ಮಾಡುವ ಸಲುವಾಗಿ ಇಸ್ರೇಲ್ ಸೇನೆ ಕ್ಷಣ ಕ್ಷಣಕ್ಕೂ ದಾಳಿಯನ್ನು ತೀವ್ರಗೊಳಿಸುತ್ತಲೇ ಇದೆ. ಇದೀಗ ಹಮಾಸ್ ಉಗ್ರರು ಗಾಜಾಪಟ್ಟಿಯಲ್ಲಿ ಬಳಸಿದ ಸುರಂಗಗಳನ್ನ ಕೃತಕ ಪ್ರವಾಹ ಸೃಷ್ಟಿಸುವ ಮೂಲಕ ಧ್ವಂಸಗೊಳಿಸಲು ಇಸ್ರೇಲ್ ಸೇನೆ ಪ್ಲ್ಯಾನ್ ಮಾಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ಮತ್ತೆ ಚಂದ್ರಯಾನ-3 ಪ್ರೊಪಲ್ಷನ್ ಮಾಡ್ಯೂಲ್ ತಂದ ಇಸ್ರೋ!
ಹೌದು, ಹಮಾಸ್ ಉಗ್ರರನ್ನು ನಿರ್ನಾಮ ಮಾಡುವ ಸಲುವಾಗಿ ಇಸ್ರೇಲ್ ಸೇನೆ ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಲೇ ಇದೆ. ಮಾಹಿತಿ ಪ್ರಕಾರ, ಹಮಾಸ್ ಸುರಕ್ಷಿತ ಸ್ಥಳಗಳಾಗಿದ್ದ ಸುರಂಗಗಳಲ್ಲಿ ಒತ್ತೆಯಾಳುಗಳನ್ನ ಬಂಧಿಸಿ ಮರೆಮಾಚಿತ್ತು ಎನ್ನಲಾಗಿದೆ. ಅದಕ್ಕಾಗಿಯೇ ಇಸ್ರೇಲ್ ಸುರಂಗಗಳಲ್ಲಿ ಪ್ರವಾಹ ಸೃಷ್ಟಿಸಲು ಯೋಜನೆ ರೂಪಿಸಿದೆ ಅಂತಾ ಹೇಳಲಾಗುತ್ತಿದೆ.
ಇನ್ನು ಇಸ್ರೇಲ್ ಸೇನೆ ಸುರಂಗಗಳಲ್ಲಿ ಪ್ರವಾಸ ಸೃಷ್ಟಿಸಿ ಉಗ್ರರನ್ನು ಮಟ್ಟಹಾಕಲು ಕೆಲ ದಿನಗಳ ಹಿಂದೆಯೇ ಪ್ಲ್ಯಾನ್ ಮಾಡಿದಂತಿದೆ. ಏಕೆಂದರೆ ಕಳೆದ ನವೆಂಬರ್ ಮಧ್ಯದಲ್ಲಿಯೇ ಇಸ್ರೇಲ್ ಸೇನೆಯು ಅಲ್-ಶಾತಿ ನಿರಾಶ್ರಿತರ ಶಿಬಿರದ ಉತ್ತರಕ್ಕೆ ಕನಿಷ್ಠ ಒಂದು ಮೈಲಿಯಷ್ಟು ದೂರಕ್ಕೆ 5 ಪಂಪ್ಗಳನ್ನ ನಿರ್ಮಿಸಿದೆ. ಈ ಪಂಪ್ಗಳ ಮೂಲಕ ಗಂಟೆಗೆ ಸಾವಿರಾರು ಘನ ಮೀಟರ್ಗಳಷ್ಟು ನೀರನ್ನು ಚಿಮ್ಮಿಸಬಹುದು. ಕನಿಷ್ಠ ಒಂದೇ ವಾರದಲ್ಲಿ ಸುರಂಗಗಳಲ್ಲಿ ನೀರು ತುಂಬಿಕೊಂಡು ಪ್ರವಾಹ ಸೃಷ್ಟಿಬಹುದು ಅನ್ನೋದು ಇಸ್ರೇಲ್ನ ಮಾಸ್ಟರ್ ಪ್ಲ್ಯಾನ್ ಆಗಿದೆ.
ಆದ್ರೆ ಇಸ್ರೇಲ್ ರಕ್ಷಣಾ ಪಡೆ ಈವರೆಗೆ ಈ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ವಿವಿಧ ಮಿಲಿಟರಿ ಮತ್ತು ಸಾಂತ್ರಿಕ ಸಾಧನಗಳನ್ನು ಬಳಸಿಕೊಂಡು ಸಾಮರ್ಥ್ಯಗಳನ್ನ ಬಳಸಿಕೊಂಡೇ ಸುರಂಗಗಳನ್ನು ಕೆಡವುವ ಬಗ್ಗೆ ಕಾರ್ಯನಿರ್ವಹಿಸುತ್ತಿದೆ ಅಂತಾ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.