ಭಾರತದಲ್ಲಿ ನಿರ್ಮಾಣವಾಗಲಿದೆ ದೇಶದ ಮೊದಲ ಅಂತರಿಕ್ಷ ನಿಲ್ದಾಣ! – 2028ರ ಹೊತ್ತಿಗೆ ಇಸ್ರೋ ಹೊಸ ಮೈಲುಗಲ್ಲು!
ಭಾರತೀಯ ಬಾಹ್ಯಾಕಾಶ ಸಂಸ್ಥೆ ಚಂದ್ರಯಾನ 3 ಮೂಲಕ ಹೊಸ ಮೈಲುಗಲ್ಲು ಸಾಧಿಸಿದೆ. ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಇದೀಗ ಇಸ್ರೋ ಸಂಸ್ಥೆ ಹೊಸ ಹೆಜ್ಜೆಯೊಂದನ್ನು ಇಟ್ಟಿದೆ. ಭಾರತದಲ್ಲಿ 2028ರಷ್ಟೊತ್ತಿಗೆ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಜೀವನದಲ್ಲಿ ಮೊದಲ ಬಾರಿಗೆ ಭಾವುಕನಾಗಿದ್ದೇನೆ – 11 ದಿನಗಳ ವ್ರತ ಆರಂಭಿಸಿದ ಮೋದಿ
ಈ ಬಗ್ಗೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮಾಹಿತಿ ನೀಡಿದ್ದಾರೆ. ಭಾರತವು ತನ್ನ ಅಸ್ತಿತ್ವದಲ್ಲಿರುವ ಸಾಮರ್ಥ್ಯಗಳನ್ನು ಬಳಸಿಕೊಂಡು 2028 ರ ವೇಳೆಗೆ ಮೊದಲ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ. ಭಾರತದ ಪ್ರತಿಭೆ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ, ಮುಂದಿನ 5 ರಿಂದ 10 ವರ್ಷಗಳಲ್ಲಿ ಭೂಮಿಯ ಮೇಲಿನ ವಿವಿಧ ಕಾರ್ಯಗಳಿಗಾಗಿ ಕೈಗಾರಿಕೆಗಳು ನೂರಾರು ಬಾಹ್ಯಾಕಾಶ ನೌಕೆಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಭಾರತದ ಮೊದಲ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾದ ನಂತರ, ನೀವು (ಗಗನಯಾತ್ರಿಗಳು) ಬಂದು ಪ್ರಯೋಗಗಳನ್ನು ನಡೆಸಲು ಪ್ರಯೋಗಾಲಯವಾಗಿ ಅಭಿವೃದ್ಧಿಪಡಿಸಲು ನಾವು ಬಯಸುತ್ತೇವೆ. 2035 ರ ವೇಳೆಗೆ ನಾವು ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳನ್ನು ಮಾಡಬಹುದಾದ ಪ್ರಯೋಗಾಲಯಗಳು, ಸಂಸ್ಥೆಗಳು, ವೈಜ್ಞಾನಿಕ ಸಂಸ್ಥೆಗಳನ್ನು ನಾವು ಹೊಂದಿರಲಿದ್ದೇವೆ.