ಚಂದ್ರಯಾನ-3 ಉಡಾವಣೆ ವೇಳೆ ಕೌಂಟ್​ಡೌನ್ ಗೆ​ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ಇನ್ನಿಲ್ಲ!

ಚಂದ್ರಯಾನ-3 ಉಡಾವಣೆ ವೇಳೆ ಕೌಂಟ್​ಡೌನ್ ಗೆ​ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ಇನ್ನಿಲ್ಲ!

ನವದೆಹಲಿ: ಚಂದ್ರಯಾನ -3 ಉಡಾವಣೆ ವೇಳೆ ಕೌಂಟ್‌ಡೌನ್‌ ಗೆ ಧ್ವನಿ ನೀಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ವಲರಮತಿ ಅವರು ಮೂಲತಃ ತಮಿಳುನಾಡಿನ ಅರಿಯಲೂರಿನವರು. ವಲರಮತಿ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂದ್ರಯಾನ 3 ವೇಳೆ ನೀಡಿದ ಧ್ವನಿ ಅವರ ಕೊನೆಯ ಕೌಂಟ್​ಡೌನ್ ಧ್ವನಿಯಾಗಿದೆ.

ಇದನ್ನೂ ಓದಿ: ಬಾಹ್ಯಾಕಾಶದಲ್ಲಿರುವ ಒಟ್ಟು ಸೌರ ಮಿಷನ್ ಗಳೆಷ್ಟು? – ಯಾವ ಯಾವ ದೇಶಗಳು ಉಪಗ್ರಹಳನ್ನು ಉಡಾವಣೆ ಮಾಡಿವೆ?

ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಆಕೆಯ ಅಂತಿಮ ಕೌಂಟ್‌ಡೌನ್ ಘೋಷಣೆಯಾಗಿತ್ತು. ಅವರು ಅನಿರೀಕ್ಷಿತವಾಗಿ ನಿಧನರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಲರ್ಮತಿ ಯಾರು?

ವಲರ್ಮತಿ ಆರ್‌ಐಎಸ್‌ಎಟಿ-1ರ ಪಾಜೆಕ್ಟ್ ಡೈರೆಕ್ಟರ್ ಆಗಿದ್ದು, 2015ರಲ್ಲಿ ಸರ್ಕಾರ ನೀಡಿದ ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದರು. ವಲರ್ಮತಿ 1984ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2ಎ, ಐಆರ್‌ಎಸ್, ಐಸಿ, ಐಡಿ, ಟಿಇಎಸ್ ಸೇರಿದಂತೆ ಹಲವು ಕಾರ್ಯಾಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

suddiyaana