ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ – ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್!

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ – ನಿದ್ದೆಯಲ್ಲಿದ್ದ ಉದ್ಯಮಿಗಳಿಗೆ ಶಾಕ್!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಉದ್ಯಮಿಗಳಿಗೆ ಬೆಳ್ಳಂಬೆಳ್ಳಗ್ಗೆ ಐಟಿ ಶಾಕ್‌ ನೀಡಿದೆ. ನಗರದ ಆಡುಗೋಡಿ, ಮಾಗಡಿ ರಸ್ತೆ ಸೇರಿದಂತೆ ಮಂಗಳವಾರ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಎರಡು ಇನೋವಾ ಕಾರ್ ನಲ್ಲಿ ಬಂದಿರುವ ಆರು ಅಧಿಕಾರಿಗಳು ಮಾಗಡಿರಸ್ತೆ, ಆಡುಗೋಡಿಯ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: “ಪೆನ್ ಡ್ರೈವ್ ಬ್ರದರ್” ಹೆಸರಿನಲ್ಲಿ ಸಿನಿಮಾ ಪೋಸ್ಟರ್‌ – ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರ ಕುಮಾರಸ್ವಾಮಿ ವಿರುದ್ಧ ಲೇವಡಿ ಮಾಡಿದ್ಯಾರು?

ಮಾಗಡಿ ರಸ್ತೆ ಬಳಿ ಇರುವ ಇಟಿಎ ಗಾರ್ಡನ್ ಅಪಾರ್ಟ್ಮೆಂಟ್‌ನಲ್ಲಿ ಇರುವ ಪುನೀತ್ ಬೋರಾ ಮನೆ ಮೇಲೆ ದಾಳಿ ನಡೆಸಿದ್ದಾರೆ. ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಆಡುಗೋಡಿ ಬಳಿಯ ಆಕ್ರೋಪೊಲಿಸ್ ಅಪಾರ್ಟ್ಮೆಂಟ್‌ನಲ್ಲಿಯೂ ಸಹ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಿಕ್ಕಿ ಘೋಷ್ ಎಂಬವರ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಉದ್ಯಮಿಯಾಗಿರುವ ರಿಕ್ಕಿ ಘೋಷ್ ನೆಲೆಸಿರುವ ಅಪಾರ್ಟ್ಮೆಂಟ್‌ನಲ್ಲಿ ಹುಡುಕಾಟ ನಡೆಯುತ್ತಿದೆ.

ನವೆಂಬರ್ 20 ರಂದು ಬೆಂಗಳೂರಿನಲ್ಲಿ ಒಟ್ಟು 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿತ್ತು. ಅಲ್ಲದೇ ಶನಿವಾರ ಕೂಡ ಬೆಂಗಳೂರಿನ ವಿವಿದೆಡೆ ಡ್ರೈಫ್ರೂಟ್ ವ್ಯಾಪಾರಿಗಳ ಮನೆ ಹಾಗೂ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.

Shwetha M