ಕಾಂಗ್ರೆಸ್‌ ಕಾರ್ಯಕರ್ತರಿಗೆ ಬಿಗ್‌ ಶಾಕ್‌! – ಜಮೀರ್‌, ಗೃಹಸಚಿವ ಪರಮೇಶ್ವರ್ ಆಪ್ತರ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್‌ ಕಾರ್ಯಕರ್ತರಿಗೆ ಬಿಗ್‌ ಶಾಕ್‌! – ಜಮೀರ್‌, ಗೃಹಸಚಿವ ಪರಮೇಶ್ವರ್ ಆಪ್ತರ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್‌ ಕಾರ್ಯಕರ್ತರಿಗೆ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಶಾಕ್‌ ಕೊಟ್ಟಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತರ ಮನೆಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ​ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ!

ಗೃಹ ಸಚಿವ ಜಿ.ಪರಮೇಶ್ವರ್ ಆಪ್ತ , ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಗುರುವಾರ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ.   ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದು, ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ.

ಇನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತನ ನಿವಾಸದ ಮೇಲೆಯೂ ಆದಾಯ ತೆರಿಗೆ ಅಧಿಕಾರಿಗಳು (ಐಟಿ) ದಾಳಿ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಆಪ್ತ ಹಾಗೂ ಮಾಜಿ ಎಂಎಲ್​ಸಿ ಎಂ.ಸಿ ವೇಣುಗೋಪಾಲ್ ಅವರ ಬೆಂಗಳೂರಿನ ಜೆಪಿ ನಗರದ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 4 ಇನ್ನೊವಾ ಕಾರುಗಳಲ್ಲಿ ಬಂದಿರುವ 15 ಅಧಿಕಾರಿಗಳು ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.

Shwetha M