ರೂಪಾ ಸಂಸಾರದಲ್ಲಿ ಹುಳಿ ಹಿಂಡಿದ್ರಾ ಸಿಂಧೂರಿ? – ಇದು ನನ್ನ ಸಂಸಾರದ ಉಳಿವಿಗಾಗಿ ಹೋರಾಟ ಎಂದಿದ್ಯಾಕೆ ರೂಪಾ?
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಟಾಪಟಿ ಜೋರಾಗಿಯೇ ಸಾಗುತ್ತಿದೆ. ಆದರೆ, ನಾನು ನನ್ನ ಕುಟುಂಬ ಉಳಿಸಿಕೊಳ್ಳಲು ಹೋರಾಡ್ತಿದ್ದೇನೆ ಅಷ್ಟೇ ಎಂದು ಡಿ. ರೂಪಾ ಹೇಳಿದ್ದಾರೆ. ನಾನು, ನನ್ನ ಗಂಡ ಇನ್ನೂ ಒಟ್ಟಾಗಿದ್ದೇವೆ. ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಈ ಹೋರಾಟ ಮಾಡುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ತನ್ನ ಹೋರಾಟದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಬೀದಿ ಜಗಳದ ಬೆನ್ನಲ್ಲೇ ರೋಹಿಣಿ, ರೂಪಾ ಎತ್ತಂಗಡಿ – ಮುನೀಶ್ ಮೌದ್ಗಿಲ್ ರನ್ನೂ ವರ್ಗಾವಣೆ ಮಾಡಿದ್ದೇಕೆ..?
ತನ್ನ ಮನದಾಳದ ನೋವನ್ನು ಡಿ. ರೂಪಾ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. ‘ಆತ್ಮೀಯ ಮಾಧ್ಯಮಗಳೇ, ದಯವಿಟ್ಟು ನಾನು ರೋಹಿಣಿ ಸಿಂಧೂರಿ ವಿರುದ್ಧ ಎತ್ತಿದ ಭ್ರಷ್ಟಾಚಾರದ ವಿಷಯದ ಬಗ್ಗೆ ಗಮನಹರಿಸಿ. ಜನಸಾಮಾನ್ಯರ ಮೇಲೆ ಹೆಚ್ಚು ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಯಾರನ್ನೂ ನಾನು ತಡೆದಿಲ್ಲ. ಅದೇ ರೀತಿ, ಕರ್ನಾಟಕದಲ್ಲಿ ಒಬ್ಬ ಐಎಎಸ್ ಅಧಿಕಾರಿ ಮೃತಪಟ್ಟಿದ್ದಾರೆ, ಹಾಗೂ ತಮಿಳುನಾಡಿನಲ್ಲಿ ಒಬ್ಬ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ, ಕರ್ನಾಟಕದಲ್ಲಿ ಒಬ್ಬ ಐಎಎಸ್ ಪತಿ-ಪತ್ನಿ ಈಗಾಗಲೇ ವಿಚ್ಛೇದನ ಪಡೆದಿದ್ದಾರೆ. ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ. ನಾವು ಇನ್ನೂ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಕುಟುಂಬಕ್ಕೆ ಕಂಟಕಪ್ರಾಯವಾಗುವುವರನ್ನು ದಯವಿಟ್ಟು ಪ್ರಶ್ನಿಸಿ. ಇಲ್ಲದಿದ್ದರೆ ಇನ್ನೂ ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಂತ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲಾ ಮಹಿಳೆಯರಿಗೂ ಹೋರಾಟ ಮಾಡುವ ಶಕ್ತಿ ಇರುವುದಿಲ್ಲ. ದಯವಿಟ್ಟು ಅಂತಹ ಮಹಿಳೆಯರಿಗೆ ಧ್ವನಿಯಾಗಿರಿ. ಭಾರತವು ಕೌಟುಂಬಿಕ ಮೌಲ್ಯಗಳಿಗೆ ಹೆಸರುವಾಸಿಯಾಗಿದೆ. ಅದನ್ನು ಮುಂದುವರಿಸೋಣ. ಧನ್ಯವಾದಗಳು ಎಂದು ರೂಪಾ ಪೋಸ್ಟ್ ಮಾಡಿದ್ದಾರೆ.
ಐಎಎಸ್ ಅಧಿಕಾರಿಯಾಗಿದ್ದುಕೊಂಡು ಅವರು ಸಾಕಷ್ಟು ಮನೆ ಹಾಳು ಮಾಡಿದ್ದಾರೆ. ನನ್ನ ಕುಟುಂಬ ಉಳಿಸಿಕೊಳ್ಳಲು ನಾನು ಹೋರಾಡ್ತಿದ್ದೇನೆ ಎಂದು ರೂಪಾ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.