ಭೀಕರ ಚಂಡಮಾರುತಕ್ಕೆ 5 ಜನರು ಸಾವು – 500 ಕ್ಕೂ ಅಧಿಕ ಮಂದಿಗೆ ಗಾಯ, ಪ್ರಧಾನಿ ಮೋದಿ ಸಂತಾಪ!

ಭೀಕರ ಚಂಡಮಾರುತಕ್ಕೆ 5 ಜನರು ಸಾವು – 500 ಕ್ಕೂ ಅಧಿಕ ಮಂದಿಗೆ ಗಾಯ, ಪ್ರಧಾನಿ ಮೋದಿ ಸಂತಾಪ!

ಪಶ್ಚಿಮ ಬಂಗಾಳದಲ್ಲಿ ಭೀಕರ ಚಂಡಮಾರುತ ಸಂಭವಿಸಿದೆ. ಜಲ್ಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಚಂಡಮಾರುತ ಅಪ್ಪಳಿಸಿದ್ದು. ಈ ಅವಘಡದಲ್ಲಿ ಐವರು ಸಾವನ್ನಪ್ಪಿದ್ದಾರೆ. 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಏಪ್ರಿಲ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್! – ಸಿಲಿಂಡರ್​​ ಬೆಲೆ 30.50 ರೂ. ಇಳಿಕೆ

ಜಲ್ಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಚಂಡಮಾರುತದಿಂದ ಭಾರೀ ಹಾನಿ ಉಂಟಾಗಿದೆ. ಅನೇಕ ಮರಗಳು ಧರೆಗುರುಳಿವೆ. ಹಲವು ಮನೆಗಳು ನೆಲಸಮವಾಗಿವೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಚಂಡಮಾರುತದಿಂದಾಗಿ ರಾಜರಹತ್, ಬರ್ನೀಷ್, ಬಾಕಲಿ, ಜೋರ್ಪಕ್ಡಿ, ಮಧಬ್ದಂಗ, ಸಪ್ತಿಬರಿ ಹೆಚ್ಚು ಹಾನಿಯಾಗಿದ್ದು, ಹಲವಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. ಮೃತರನ್ನು ದಿಜೇಂದ್ರ ನಾರಾಯಣ ಸರ್ಕಾರ್ (52), ಅನಿಮಾ ಬರ್ಮನ್ (45), ಜಗನ್ ರಾಯ್ (72) ಮತ್ತು ಸಮರ್ ರಾಯ್ (64) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M