ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ – ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ – ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ  ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ವರದಿಯಾಗಿದೆ.

ಬುಧವಾರ ಮುಂಜಾನೆ ಜಮ್ಮು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಭದ್ರತಾ ಪಡೆ ಸಿಬ್ಬಂದಿಗಳು ಉಗ್ರರತ್ತ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಕೆಲ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿಗಳು ಎನ್‌ ಕೌಂಟರ್‌ ಮಾಡಿದ್ದಾರೆ.

ಇದನ್ನೂ ಓದಿ: ಮೂಗಿನ ಮೂಲಕ ಹಾಕುವ ಲಸಿಕೆಗೆ ದರ ನಿಗದಿ – ಜನವರಿ ನಾಲ್ಕನೇ ವಾರದಿಂದ ಲಸಿಕೆ ಲಭ್ಯ

ಪೊಲೀಸರು ಸಂಶಯಗೊಂಡು ಟ್ರಕ್‌ ವೊಂದನ್ನು ಸಿದ್ರಾ ಬಳಿ ನಿಲ್ಲಿಸಿ ಪರಿಶೀಲಿಸಿದಾಗ ಅದರ ಒಳಗಡೆ ಉಗ್ರರು ಅಡಗಿರುವುದು ಪತ್ತೆಯಾಗಿದೆ. ಸಿಬ್ಬಂದಿಗಳ ಮೇಲೆ ಇಬ್ಬರು ಉಗ್ರರು ಗುಂಡು ಹಾರಿಸಲು ಮುಂದಾಗಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿಗಳು ಗುಂಡು ಹಾರಿಸಿ ಮೂವರು ಉಗ್ರರನ್ನು ಎನ್‌ ಕೌಂಟರ್‌ ಮಾಡಲಾಗಿದೆ ಎಂದು ಎಡಿಜಿಪಿ ಮುಕೇಶ್‌ ಸಿಂಗ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಪೂಂಚ್ ನಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ಸಿಬ್ಬಂದಿಗಳು ಜಂಟಿ ಕಾರ್ಯಚರಣೆ ನಡೆಸಿ ಉಗ್ರರನ್ನು ಸೆರೆ ಹಿಡಿದ ಅವರಿಂದ ಪಿಸ್ತೂಲ್‌ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು.

suddiyaana