ಜಮ್ಮುಕಾಶ್ಮೀರದ ಪೂಂಚ್‌ನಲ್ಲಿ ಉಗ್ರರ ದಾಳಿ – ಹುತಾತ್ಮರ ಸಂಖ್ಯೆ 5 ಕ್ಕೆ ಏರಿಕೆ
ಜಮ್ಮುಕಾಶ್ಮೀರದ ಪೂಂಚ್ ನವ್ವಿ ಥಾನಮಂಡಿಯಲ್ಲಿ ನಡೆದ ಭಯೋತ್ವಾದಕ ದಾಳಿಯಲ್ಲಿ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.
ಗುರುವಾರ ಪೂಂಚ್ ನವ್ವಿ ಥಾನಮಂಡಿಯಲ್ಲಿ ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು. ಈ ವೇಳೆ ಭಾರತೀಯ ಯೋಧರು ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರ ನೀಡಿದ್ದಾರೆ. ಕೂಡಲೇ ಸ್ಥಳದಲ್ಲಿ ಎನ್‌ಕೌಂಟರ್ ಆರಂಭವಾಗಿತ್ತು. ಈ ವೇಳೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಪ್ರಾಣ ಕಳೆದುಕೊಂಡು, ಇಬ್ಬರು ಗಾಯಗೊಂಡಿದ್ದರು. ಇದೀಗ ಮತ್ತೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕ್ರಿಸ್‌ಮಸ್‌ಗೆ ಸಾಲು ಸಾಲು ರಜೆ – ಕೆಎಸ್‌ಆರ್‌ಟಿಸಿಯಿಂದ 1,000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ನವೆಂಬರ್ 22 ರಂದು ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಯೋಧ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು. ಇದಕ್ಕೂ ಮೊದಲು ಸೆಪ್ಟೆಂಬರ್ ನಲ್ಲಿ ನಡೆದ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಈ ವರ್ಷ ರಜೌರಿ, ಪೂಂಚ್ ಮತ್ತು ರೆಸಾಯ್ ಜಿಲ್ಲೆಗಳಲ್ಲಿ ಯೋಧರು ಮತ್ತು ಉಗ್ರರ ನಡುವಿನ ಮುಖಾಮುಖಿ, ಉಗ್ರರ ದಾಳಿಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 19 ಯೋಧರು. 28 ಮಂದಿ ಉಗ್ರರು ಹಾಗೂ 7 ನಾಗರೀಕರು ಸೇರಿದ್ದಾರೆ.