ಹಾಸನ ಪೆನ್‌ಡ್ರೈವ್‌ ಕೇಸ್‌ – ಪ್ರಜ್ವಲ್‌ ರೇವಣ್ಣ ಹುಡುಕಿಕೊಟ್ರೆ 1 ಲಕ್ಷ ಬಹುಮಾನ!

ಹಾಸನ ಪೆನ್‌ಡ್ರೈವ್‌ ಕೇಸ್‌ – ಪ್ರಜ್ವಲ್‌ ರೇವಣ್ಣ ಹುಡುಕಿಕೊಟ್ರೆ 1 ಲಕ್ಷ ಬಹುಮಾನ!

ಪ್ರಜ್ವಲ್‌ ರೇವಣ್ಣ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಎಲ್ಲಿದ್ದಾರೆ ಎಂಬುವುದು ಯಾರಿಗೂ ಗೊತ್ತಿಲ್ಲ.. ಇಂದು ಬರ್ತಾರೆ.. ನಾಳೆ ಬರ್ತಾರೆ ಅಂತಾ ಎಸ್‌ಐಟಿ ಅಧಿಕಾರಿಗಳ ತಂಡ ಕಾದಿದ್ದೇ ಬಂತು.. ಇದೀಗ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಭಿಯಾನವೊಂದು ಆರಂಭವಾಗಿದೆ.

ಇದನ್ನೂ ಓದಿ: ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ, ಇದು ಅಷ್ಟೇ ಸತ್ಯ – ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಬಿಎಸ್‌ವೈ ಏನಂದ್ರು?  

ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ಕೊಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು.

ಈ ಬೆನ್ನಲ್ಲೇ ಪೊಲೀಸರು ಕ್ರಮಕೈಗೊಂಡಿದ್ದಾರೆ. ಪೋಸ್ಟರ್‌ ಅಂಟಿಸುತ್ತಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಹುಮಾನ ಘೋಷಿಸಿ ಅಂಟಿಸಿದ್ದ ಪೋಸ್ಟರ್ ಅನ್ನು ಪೊಲೀಸರು ತೆರವುಗೊಳಿಸಿದ್ದಾರೆ.

Shwetha M