ಜಪಾನ್ನಲ್ಲಿ 155 ಬಾರಿ ಕಂಪಿಸಿದ ಭೂಮಿ – ಸಾವಿನ ಸಂಖ್ಯೆ 48 ಕ್ಕೆ ಏರಿಕೆ

ಹೊಸ ವರ್ಷದ ಮೊದಲ ದಿನವೇ ಜಪಾನ್ಗೆ ಪ್ರಕೃತಿ ಶಾಕ್ ನೀಡಿದೆ. ಈಶಾನ್ಯ ಜಪಾನ್ನಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಈ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಸೋಮವಾರ ಜಪಾನ್ನಲ್ಲಿ 155 ಬಾರಿ ಭೂಮಿ ಕಂಪಿಸಿದೆ. ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವಾಗಿದ್ದು, ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ದಾಖಲಾಗಿದೆ. ಈ ಅವಘಡದಲ್ಲಿ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ, ನೂರಾರು ಮಂದಿ ಗಾಯಗೊಂಡಿದ್ದಾರೆ. 32 ಸಾವಿರಕ್ಕೂ ಅಧಿಕ ಮಂದಿ ಕಂಪನದಿಂದ ಸಂತ್ರಸ್ಥರಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಮಕ್ಕಳಾಗದ ಮಹಿಳೆಯರನ್ನು ಗರ್ಭಿಣಿ ಮಾಡಿದ್ರೆ 13 ಲಕ್ಷ ರೂ. ಬಹುಮಾನ! – ಸಂತಾನ ಭಾಗ್ಯ ಕೊಡಲು ಹೋದವರಿಗೆ ಕಾದಿತ್ತು ಬಿಗ್ ಶಾಕ್!
ಭೂಕಂಪನದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅನೇಕ ಕಟ್ಟಗಳು ನೆಲಸಮವಾಗಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಭೂಕಂಪನದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು, ವರ್ಷದ ಆರಂಭದಲ್ಲೇ ಸೆಂಟ್ರಲ್ ಜಪಾನ್ ನ ನಾಗರೀಕರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗುವಂತಾಗಿದೆ. ಜಪಾನ್ ಮಿಲಿಟರಿ ಬೇಸ್ ನಲ್ಲಿ ಕನಿಷ್ಠ ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಇನ್ನು ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. 5 ಮೀಟರ್ (16 ಅಡಿ) ಎತ್ತರದವರೆಗೆ ಅಲೆಗಳು ಬರುವ ಸಾಧ್ಯತೆಯಿದ್ದು, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿತ್ತು. ಸೋಮವಾರ ಕನಿಷ್ಠ 1.2 ಮೀಟರ್ (ನಾಲ್ಕು ಅಡಿ) ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿವೆ. ಇದರ ಬೆನ್ನಲ್ಲೇ ಸಣ್ಣ ಸುನಾಮಿಗಳ ಸರಣಿಯು ಕೂಡ ಇತರೆಡೆ ವರದಿಯಾಗಿದೆ. ಆದರೆ ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.