ಜಪಾನ್​ನಲ್ಲಿ ಭೀಕರ ಭೂಕಂಪ –  ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ಜಪಾನ್​ನಲ್ಲಿ ಭೀಕರ ಭೂಕಂಪ –  ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ಹೊಸ ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಕೃತಿ ಶಾಕ್‌ ನೀಡಿದೆ. ಈಶಾನ್ಯ ಜಪಾನ್‌ನಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಈ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 62 ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಸೋಮವಾರ ಜಪಾನ್‌ನಲ್ಲಿ 155 ಬಾರಿ ಭೂಮಿ ಕಂಪಿಸಿದೆ. ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವಾಗಿದ್ದು, ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ದಾಖಲಾಗಿದೆ. ಈ ಅವಘಡದಲ್ಲಿ ಸಾವಿನ ಸಂಖ್ಯೆ 68ಕ್ಕೆ ಏರಿಕೆಯಾಗಿದೆ, ನೂರಾರು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಹುದುಗಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.  32 ಸಾವಿರಕ್ಕೂ ಅಧಿಕ ಮಂದಿ ಕಂಪನದಿಂದ ಸಂತ್ರಸ್ಥರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: 3 ದಶಕಗಳ ಹಿಂದಿನ ಗಲಭೆಗೆ ಮರುಜೀವ – ರಾಮನ ಹೆಸರಲ್ಲಿ ದ್ವೇಷ ಸಾಧಿಸ್ತಿದ್ಯಾ ಕಾಂಗ್ರೆಸ್?

ಹೆಚ್ಚಿನ ಸಾವುಗಳು ಇಶಿಕಾವಾದಲ್ಲಿ ಸಂಭವಿಸಿವೆ, ಆದರೆ ಮನೆಗಳು ವ್ಯಾಪಕವಾಗಿ ಹಾನಿಗೊಳಗಾಗಿವೆ. ಉಂಟಾದ ಹಾನಿಯ ಪ್ರಮಾಣವನ್ನು ನಿರ್ಣಯಿಸಲು ಸಾಧ್ಯವಾಗಲಿಲ್ಲ. ಕರಾವಳಿ ನಗರಗಳಲ್ಲಿ ಮಣ್ಣಿನ ಪ್ರವಾಹ ಕಾಣಿಸಿಕೊಂಡಿದೆ. ಭೂಕಂಪದ ತೀವ್ರತೆಗೆ ಅನೇಕ ಕಟ್ಟಡಗಳು, ವಾಹನಗಳು ಮತ್ತು ದೋಣಿಗಳು ಹಾನಿಗೊಳಗಾಗಿವೆ. ಭೂಕಂಪದ ಅಪಾಯದ ದೃಷ್ಟಿಯಿಂದ ಅಧಿಕಾರಿಗಳು ಮಂಗಳವಾರ ಎಚ್ಚರಿಕೆಯನ್ನು ನೀಡಿದ್ದು, ಕೆಲವು ಪ್ರದೇಶಗಳಲ್ಲಿನ ಜನರು ತಮ್ಮ ಮನೆಗಳಿಂದ ದೂರ ಉಳಿಯುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಇನ್ನೂ ಕೆಲವು ಪ್ರದೇಶಗಳಲ್ಲಿ ನೀರು, ವಿದ್ಯುತ್ ಮತ್ತು ಸೆಲ್‌ಫೋನ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರದ ವಕ್ತಾರ ಯೋಶಿಮಾಸಾ ಹಯಾಶಿ ಹೇಳಿದ್ದಾರೆ. ನಿವಾಸಿಗಳು ತಮ್ಮ ನೆಲಕಚ್ಚಿದ ಮನೆಗಳು ತಮ್ಮ ಭವಿಷ್ಯದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಜಪಾನ್‌ನ ಸೇನೆಯು 1,000 ಸೈನಿಕರನ್ನು ವಿಪತ್ತು ಪ್ರದೇಶಗಳಿಗೆ ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸಲಾಗಿದೆ ಎಂದು ಪ್ರಧಾನಿ ಫ್ಯೂಮಿಯೊ ತಿಳಿಸಿದ್ದಾರೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

Shwetha M