ಬೇಲೂರು ಬಗರ್ ಹುಕ್ಕುಂ ಗೋಲ್‌ಮಾಲ್ – ಬೇಲೂರು ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸಿಐಡಿ ವಶಕ್ಕೆ

ಬೇಲೂರು ಬಗರ್ ಹುಕ್ಕುಂ ಗೋಲ್‌ಮಾಲ್ –  ಬೇಲೂರು ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸಿಐಡಿ ವಶಕ್ಕೆ

ಹಾಸನ  ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇಲೂರು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ವೇಳೆ 2016 ರಿಂದ 2022ರ ನಡುವೆ ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ದಾಖಲಿಸಿದ್ರು.  ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು,  ಇಂದು ಹಳೇಬೀಡಿನಲ್ಲಿರುವ ಅವರ ನಿವಾಸದಲ್ಲೇ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:ಮೊನ್ನೆ ಕಾಂಟ್ರವರ್ಸಿ.. ಈಗ ಪ್ಯಾಚಪ್.. ‌ಮಾದರಿ ದಂಪತಿ ಕರೆಸಿ ತೇಪೆ ಹಚ್ಚಿದ್ರಾ? – ಜೋಡಿ No.1 ಶೋ TRP ಗಿಮಿಕ್ ಇದಾ?

ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ ಬೇಲೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣವನ್ನು ಸಿಐಡಿಗೆ ಹಸ್ತಾಂತಿರಿಸಲಾಗಿತ್ತು.

ದೂರಿನಲ್ಲಿ ಸುಮಾರು 2750 ಎಕರೆ ಸರ್ಕಾರಿ ಜಮೀನನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಇತರರ ವಿರುದ್ಧ ವಿವಿಧ ಸೆಕ್ಷನ್​​ಗಳಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸದ್ಯ ಪ್ರಕರಣ ಸಂಬಂಧ ಮಾಜಿ ಶಾಸಕರನ್ನ ಸಿಐಡಿ ಪೊಲೀಸರು ಅರೆಸ್ಟ್ ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Kishor KV

Leave a Reply

Your email address will not be published. Required fields are marked *