ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಹವಾ – ಬೀದರ್‌ನಲ್ಲಿ ಎರಡನೇ ಹಂತದ ಪಂಚರತ್ನ ರಥಯಾತ್ರೆ

ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಹವಾ –  ಬೀದರ್‌ನಲ್ಲಿ ಎರಡನೇ ಹಂತದ ಪಂಚರತ್ನ ರಥಯಾತ್ರೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಬಾರಿ ಜೆಡಿಎಸ್ ರಥಯಾತ್ರೆ ಸಂಚರಿಸಲಿದೆ. ಎರಡನೇ ಹಂತದ ಪಂಚರತ್ನ ರಥಯಾತ್ರೆ ಜನವರಿ 5ರಿಂದ ಬೀದರ್ ಜಿಲ್ಲೆಯಿಂದ ಪ್ರಾರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೀದರ್ ಮತ್ತು ಕಲಬುರಗಿಯಲ್ಲಿ ಜ.13ರವರೆಗೆ ರಥಯಾತ್ರೆ ನಡೆಯಲಿದೆ. ಬೀದರ್ ಜಿಲ್ಲೆಯಲ್ಲಿ ನಾಲ್ಕು ದಿನ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಐದು ದಿನ ರಥಯಾತ್ರೆ ನಡೆಯಲಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಜ.14 ರಿಂದ 16ರವರೆಗೆ ವಿರಾಮ ಇರಲಿದೆ. ಜ.17ರಿಂದ ಇಂಡಿ ವಿಧಾನಸಭಾ ಕ್ಷೇತ್ರದಿಂದ ಮತ್ತೆ ರಥಯಾತ್ರೆ ನಡೆಯಲಿದೆ. ರಾಯಚೂರು, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಯಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:   ಮುಂದುವರಿದ ಟ್ವೀಟ್ ವಾರ್ – ಕಾಂಗ್ರೆಸ್-ಜೆಡಿಎಸ್ ಗೆ ಟೂಲ್ ಕಿಟ್ ರೆಡಿ ಮಾಡಿ ಎಂದ ಬಿಜೆಪಿ

ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ 35 ಸ್ಥಾನ ಗೆಲ್ಲಲು ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಪಕ್ಷವನ್ನು 35 ಸೀಟುಗಳಿಗೆ ಕಟ್ಟಿಹಾಕುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ಕೊನೆ ಪಕ್ಷ ಅಷ್ಟುಸೀಟು ಗೆಲ್ಲುತ್ತೇವೆ ಎಂದಿದ್ದಕ್ಕೆ ನಾವು ಅವರಿಗೆ ಆಭಾರಿ ಎಂದು ಎಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

suddiyaana