ಕೋಲಾರದಲ್ಲಿ ಜೆಡಿಎಸ್ ಭರ್ಜರಿ ಜಯಭೇರಿ – ಕಾಂಗ್ರೆಸ್ ಭದ್ರಕೋಟೆಯಲ್ಲಿ ಗೆಲುವು ಸಾಧಿಸಿದ ಮಲ್ಲೇಶ್ ಬಾಬು

ಕೋಲಾರದಲ್ಲಿ ಜೆಡಿಎಸ್ ಭರ್ಜರಿ ಜಯಭೇರಿ – ಕಾಂಗ್ರೆಸ್ ಭದ್ರಕೋಟೆಯಲ್ಲಿ ಗೆಲುವು ಸಾಧಿಸಿದ ಮಲ್ಲೇಶ್ ಬಾಬು

ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ವಿರುದ್ಧ 50 ಸಾವಿರ ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಜಯಸಾಧಿಸಿದ್ದಾರೆ.  ಕೋಲಾರ ಲೋಕಸಭಾ ಕ್ಷೇತ್ರ ಆಡಳಿತರೂಢ ಕಾಂಗ್ರೆಸ್‌ ಗೆ ಅಸ್ತಿತ್ವದ ಪ್ರಶ್ನೆಯಾದರೇ ಜೆಡಿಎಸ್‌ ಗೆ ಪ್ರತಿಷ್ಠೆಯ ಕಣವಾಗಿತ್ತು. ಆದರೆ, ಕಾಂಗ್ರೆಸ್‌ ನಾಯಕರ ಭದ್ರ ಕೋಟೆಯಾದ ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಲ್ಲೇಶ್‌ ಬಾಬು ಗೆಲುವು ಸಾಧಿಸಿದ್ದಾರೆ. ಕೋಲಾರದಲ್ಲಿ ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಲು ಆಡಳಿತರೂಢ ಕಾಂಗ್ರೆಸ್ ಹಲವು ತಂತ್ರಗಾರಿಕೆಯನ್ನ ನಡೆಸಿತ್ತು. ಆದರೆ, ಕಾಂಗ್ರೆಸ್ ನಾಯಕರ ಒಳಜಗಳದಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಲಾಭವಾಗಿದೆ. ಕಾಂಗ್ರೆಸ್ ನಾಯಕರ ಒಳಜಗಳದಿಂದಾಗಿ ಜೆಡಿಎಸ್ ನ ಮಲ್ಲೇಶ್ ಬಾಬು, ಕಾಂಗ್ರೆಸ್ ನ ಕೆ.ವಿ ಗೌತಮ್ ವಿರುದ್ಧ  ಭರ್ಜರಿ ಜಯಭೇರಿ ಸಾಧಿಸಿದ್ದಾರೆ. ಕೋಲಾರದಲ್ಲಿ ಕೈ ನಾಯಕರನ್ನ ಅಸಮಾಧಾನವೇ ಕ್ಷೇತವನ್ನು ಕಳೆದುಕೊಳ್ಳಲು ಪ್ರಮುಖ ಕಾರಣವಾಗಿದೆ.

suddiyaana