ಬೊಮ್ಮನ್ ಮತ್ತು ಬೆಳ್ಳಿಗೆ ಮರೆಯಲಾರದ ಉಡುಗೊರೆ – ಧೋನಿಯಿಂದ ಜೆರ್ಸಿ ಗಿಫ್ಟ್

ಬೊಮ್ಮನ್ ಮತ್ತು ಬೆಳ್ಳಿಗೆ ಮರೆಯಲಾರದ ಉಡುಗೊರೆ – ಧೋನಿಯಿಂದ ಜೆರ್ಸಿ ಗಿಫ್ಟ್

ಸಿಎಸ್‌ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮನ್ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಧೋನಿ ಭೇಟಿಯಾಗಿದ್ದಾರೆ. ಜೊತೆಗೆ ಬೊಮ್ಮನ್ ಮತ್ತು ಬೆಳ್ಳಿಗೆ ಮರೆಯಲಾರದ ಉಡುಗೊರೆ ನೀಡಿದ್ದಾರೆ.

ಇದನ್ನೂ ಓದಿ:  ಆರ್‌ಸಿಬಿ ತಂಡಕ್ಕೆ ಪ್ಲೇ ಆಫ್ ಹಾದಿ ದುರ್ಗಮ – ಬೌಲರ್‌ಗಳ ಬಗ್ಗೆ ಕ್ಯಾಪ್ಟನ್ ಗರಂ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮನ್ ಮತ್ತು ಬೆಳ್ಳಿ ಹಾಗೂ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ವಿಸ್ ಅವರನ್ನು ಸಿಎಸ್‌ಕೆ ನಾಯಕ ಧೋನಿ ಭೇಟಿಯಾಗಿದ್ದರು. ಅಷ್ಟೇ ಅಲ್ಲ, ತನ್ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಮಂಗಳವಾರ ಚೆಪಾಕ್ ಸ್ಟೇಡಿಯಂನಲ್ಲಿ ತರಬೇತಿ ಮುಗಿಸಿದ ನಂತರ ಎಂಎಸ್ ಧೋನಿ ಈ ಮೂವರಿಗೆ ತನ್ನ ಹಳದಿ ಜೆರ್ಸಿ ನೀಡಿದರು. ಇಷ್ಟೇ ಅಲ್ಲ, ಚೆನ್ನೈ ಸೂಪರ್ ಕಿಂಗ್ಸ್ ವತಿಯಿಂದ ಇವರಿಗಾಗಿ ವಿಶೇಷ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಇದರಲ್ಲಿ ಆಸ್ಕರ್ ವಿಜೇತ ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರದ ನಿರ್ದೇಶಕರು ಹಾಗೂ ಆನೆ ಪಾಲಕ ದಂಪತಿ ಸಹ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಈ ಮೂವರಿಗೆ 7ನೇ ನಂಬರ್‌ನ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಯಿತು. ಅದೇ ಸಮಯದಲ್ಲಿ, ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಮೊಮೆಂಟೋ ನೀಡುವುದರೊಂದಿಗೆ ಆನೆಗಳ ಆರೈಕೆಗಾಗಿ ಮುದುಮಲೈ ಹುಲಿ ಸಂರಕ್ಷಣಾ ಪ್ರತಿಷ್ಠಾನಕ್ಕೆ ದೇಣಿಗೆ ಕೂಡ ನೀಡಲಾಯಿತು. ಅಂದಹಾಗೆ, ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರದ ಬಗ್ಗೆ ಹೇಳಬೇಕೆಂದರೆ, ಈ ಚಿತ್ರವನ್ನು ಕಾರ್ತಿಕಿ ಗೋನ್ಸಾಲ್ವಿಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.

suddiyaana