ಸಿಲಿಕಾನ್ ಸಿಟಿಯಲ್ಲಿ ಜೋಡುಕೆರೆ ಕಂಬಳ! – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಅರಮನೆ ಮೈದಾನ
ಕರಾವಳಿಯ ಜನಪ್ರಿಯ ಕ್ರೀಡೆಗಳು, ಆಚರಣೆಗಳು ರಾಜಧಾನಿ ಬೆಂಗಳೂರಿಗೆ ಈಗಾಗಲೇ ಕಾಲಿಟ್ಟಿವೆ. ಯಕ್ಷಗಾನ ಸೇರಿದಂತೆ ವಿವಿಧ ರೀತಿಯ ಸಾಂಕ್ಕೃತಿಕ ಕಾರ್ಯಕ್ರಮಗಳನ್ನು ಕೇವಲ ಕರಾವಳಿಯಲ್ಲಿ ಅಲ್ಲದೇ ಬೆಂಗಳೂರಿನಲ್ಲೂ ಪ್ರದರ್ಶನಗೊಳ್ಳುತ್ತಿದೆ. ಇದರ ಜೊತೆಗೆ ಬೆಂಗಳೂರು ಹಾಗೂ ತುಳುನಾಡಿನ ನಂಟಿನ ಇನ್ನೊಂದು ಐತಿಹಾಸಿಕ ಕ್ಷಣಕ್ಕೆ ಸಿಲಿಕಾನ್ ಸಿಟಿ ಸಾಕ್ಷಿಯಾಗಲಿದೆ.
ಇದನ್ನೂ ಓದಿ: ಬೆಳ್ಳಿ, ಬೊಮ್ಮನ್ ದಂಪತಿಗೆ ಸಾಕ್ಷ್ಯಚಿತ್ರ ತಂಡದಿಂದಲೇ ಮೋಸ! – 2 ಕೋಟಿ ಪ್ರತಿಫಲ ಕೋರಿ ಮಾವುತ ದಂಪತಿಯಿಂದ ಲೀಗಲ್ ನೋಟಿಸ್
ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ. ಇದಕ್ಕಾಗಿ ಸೂಕ್ತ ಸ್ಥಳವನ್ನು ಸ್ಥಳವನ್ನು ಪರಿಶೀಲನೆ ಕೂಡ ನಡೆಸಲಾಗಿದೆ. ಬೆಂಗಳೂರಿನ ತುಳು ಕೂಟದ 50ನೇ ವರ್ಷದ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಕಂಬಳ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಭರ್ಜರಿಯಾಗಿ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವ ಕುರಿತು ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕೆರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳಕ್ಕಾಗಿ ಅರಮನೆ ಮೈದಾನದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆದರೆ ಕಂಬಳ ಯಾವತ್ತು ನಡೆಯಲಿದೆ ಎನ್ನುವ ಕುರಿತು ಇನ್ನೂ ದಿನಾಂಕವನ್ನು ಮಾತ್ರ ನಿಗದಿ ಮಾಡಿಲ್ಲ. ಜೊತೆಗೆ, ಯಾವ ಕೋಣಗಳನ್ನು ಇಲ್ಲಿನ ಕಂಬಳಕ್ಕೆ ಆಯ್ಕೆ ಮಾಡಬೇಕು, ಅವುಗಳನ್ನು ಊರಿನಿಂದ ಬೆಂಗಳೂರಿಗೆ ಹೇಗೆ ತರಬೇಕು ಎಂಬ ನಿಟ್ಟಿನಲ್ಲಿಯೂ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.