ಐಪಿಎಲ್ ಆರಂಭಕ್ಕೂ ಮುನ್ನವೇ ಆರ್‌ಸಿಬಿಗೆ ಬಿಗ್ ಶಾಕ್ – ಆರಂಭಿಕ ಪಂದ್ಯ ಆಡಲ್ಲ ಜೋಶ್ ಹೇಝಲ್‌ವುಡ್

ಐಪಿಎಲ್ ಆರಂಭಕ್ಕೂ ಮುನ್ನವೇ ಆರ್‌ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್‌ವುಡ್ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯನ್ ಪತ್ರಕರ್ತ ಡೇನಿಯಲ್ ಚೆರ್ನಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಅವರು ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಾತ್ರ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
ಜೋಶ್ ಹೇಝಲ್‌ವುಡ್ ಕಾಲಿನ ಹಿಮ್ಮಡಿಯ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಗಾಯದ ಕಾರಣ ಅವರು ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಈ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಆರ್ಸಿಬಿ ತಂಡದ ಮೊದಲ ಹಂತದ ಪಂದ್ಯಗಳಲ್ಲಿ ಜೋಶ್ ಹೇಝಲ್‌ವುಡ್ ಕಾಣಿಸಿಕೊಳ್ಳವುದಿಲ್ಲ. ಅಂದರೆ ಸನ್ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳಿಂದ ಹೇಝಲ್‌ವುಡ್ ಹೊರಗುಳಿಯಲಿದ್ದಾರೆ.
ಇದನ್ನೂ ಓದಿ: ವಿವಾದಕ್ಕೆ ಗುರಿಯಾಯ್ತು ಕೆಡಿ ಸಿನಿಮಾದ ಸಾಂಗ್! – ಸರ್ಸೆ ನಿನ್ನ ಸೆರಗ ಹಾಡಿನ ಸಾಹಿತ್ಯಕ್ಕೆ ಫ್ಯಾನ್ಸ್ ಗರಂ!
ಇನ್ನು ಏಪ್ರಿಲ್ ಎರಡನೇ ವಾರದೊಳಗೆ ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಜೋಶ್ ಹೇಝಲ್‌ವುಡ್ ಐಪಿಎಲ್ನಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಆಸ್ಟ್ರೇಲಿಯನ್ ವೇಗಿ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದಕ್ಕೆ ಕನ್ಫರ್ಮ್ ಆಗಲು ಮುಂದಿನ ತಿಂಗಳವರೆಗೆ ಕಾಯಲೇಬೇಕು.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಜೋಶ್ ಹೇಝಲ್‌ವುಡ್

ನೋಡಿರಿ

