ದೇಶದ 50ನೇ ಸಿಜೆಐ ಆಗಿ ಡಿವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಪಕ್ಷಾಂತರ ಪರ್ವ: ಮತದಾನಕ್ಕೆ ಕೆಲವೇ ದಿನಗಳಿರುವಾಗ ಬಿಜೆಪಿಗೆ ಸೇರಿದ 26 ಕಾಂಗ್ರೆಸ್ ನಾಯಕರು
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಯುಯು ಲಲಿತ್ ಅವರ ಸ್ಥಾನವನ್ನು ಡಿವೈ ಚಂದ್ರಚೂಡ್ ಅವರು ಅಲಂಕರಿಸಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ನ. 10, 2024 ರವರೆಗೆ 2 ವರ್ಷಗಳ ಕಾಲ ಸಿಜೆಐ ಆಗಿ ಕಾರ್ಯನಿರ್ವಹಿಸಲಾಗಿದೆ.
ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ದೇಶದ ಸಿಜೆಐ ಆಗಿ ಸುಮಾರು ಏಳು ವರ್ಷ ನಾಲ್ಕು ತಿಂಗಳು ಕಾರ್ಯನಿರ್ವಹಿಸಿದ್ದರು. ಇದು ಸುಪ್ರೀಂ ಕೋರ್ಟ್ ನ ಇತಿಹಾಸದಲ್ಲಿ ಸಿಜೆಐ ಅವರ ಸುದೀರ್ಘ ಅವಧಿಯಾಗಿದೆ. ಅವರು 22 ಫೆಬ್ರವರಿ 1978 ತಿಂದ ಜುಲೈ 1985 ರವರೆಗೆ ಮುಖ್ಯ ನ್ಯಾಯಮೂರ್ತಿಯಾಗಿದ್ದರು.