ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಮಿಶ್ರಾ, ಹಿರಿಯ ವಕೀಲ ವಿಶ್ವನಾಥನ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಬ್ಬರನ್ನು ನೇಮಕ ಮಾಡಲಾಗಿದೆ. ಗುರುವಾರ (ಮೇ 18) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಆದೇಶಕ್ಕೆ ಸಹಿ ಹಾಕಿದ್ದು, ಶುಕ್ರವಾರ ಪ್ರಮಾಣವಚನ ಸ್ಚೀಕರಿಸಿದ್ದಾರೆ.
ಇದನ್ನೂ ಓದಿ: ಡಿಸಿಎಂ ಸ್ಥಾನ ಸಿಗದಿದ್ದಕ್ಕೆ ತ್ಯಾಗದ ತೇಪೆ ಹಚ್ಚಿದ ಪರಮೇಶ್ವರ್ – ಎಲ್ಲವೂ ಮುಗಿಯಿತೆಂದು ಸೈಲೆಂಟ್!
ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಾಮನ್ ವಿಶ್ವನಾಥನ್ ಅವರು ನೇಮಕಗೊಂಡಿದ್ದಾರೆ. ಶುಕ್ರವಾರ (ಮೇ19) ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಪ್ರಮಾಣವಚನ ಬೋಧಿಸಿದ್ದಾರೆ.
ಇಬ್ಬರು ಹೊಸ ನ್ಯಾಯಾಧೀಶರ ನೇಮಕದೊಂದಿಗೆ ಸುಪ್ರೀಂ ಕೋರ್ಟ್ ಒಟ್ಟು 34 ನ್ಯಾಯಾಧೀಶರ ಬಲವನ್ನು ಹೊಂದಿದೆ. ಮೇ 16 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಇಬ್ಬರ ಪದೋನ್ನತಿಗೆ ಶಿಫಾರಸು ಮಾಡಿತ್ತು ಹಾಗೂ ಕೇಂದ್ರ ಸರಕಾರವು ಈ ಇಬ್ಬರ ನೇಮಕಾತಿಯ ಕುರಿತು ಮೇ 18ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ನೇರಪ್ರಸಾರ ಮಾಡಲಾಯಿತು.