ಮಾಜಿ ಸಿಂಗಂಗೆ ಬಿಗ್‌ಶಾಕ್‌ – ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರಾ ಅಣ್ಣಾಮಲೈ?

ಮಾಜಿ ಸಿಂಗಂಗೆ ಬಿಗ್‌ಶಾಕ್‌ – ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರಾ ಅಣ್ಣಾಮಲೈ?

ತಮಿಳುನಾಡಿನ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ನಡೆಯುತ್ತಿದೆ. ಇದೀಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ವೈಷ್ ಒಪ್ಕೊಂಡಿದ್ದು ಲಕ್ಷ್ಮೀನಾ, ಕೀರ್ತಿನಾ? – ಲಕ್ಷ್ಮೀ ಬಾರಮ್ಮ ಕೊನೆ ಸೀನ್‌ ಇದೇ?

2023 ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು. 2026ರ ವಿಧಾನಸಭೆ ಚುನಾವಣೆಗೆ ದಿ. ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರೀಕ್ಷೆ ಇದೆ. ಈಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ವೇಗಗೊಂಡಿದ್ದು, ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬಹುದು. ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ, ಕೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದೆ.  ಚುನಾವಣೆ ಸಮೀಪಿಸುತ್ತಿರುವ ರಾಜ್ಯದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ನಿರ್ಧಾರವನ್ನು ತಿಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಮಿತ್‌ ಶಾ ಅವರು, ಪಳನಿಸ್ವಾಮಿ ಅವರನ್ನು ಭೇಟಿಯಾದ ಸ್ವಲ್ಪ ಸಮಯದ ನಂತರ ಈ ಸಭೆ ನಡೆಯಿತು.

Shwetha M