ಕೆಜಿಎಫ್ 1, ಕಾಂತಾರ ಸಿನಿಮಾಗಳ ದಾಖಲೆಗಳು ಉಡೀಸ್ – ₹50 ಕೋಟಿ ‘ಕಬ್ಜ’ ಕಲೆಕ್ಷನ್!

ಕೆಜಿಎಫ್ 1, ಕಾಂತಾರ ಸಿನಿಮಾಗಳ ದಾಖಲೆಗಳು ಉಡೀಸ್ – ₹50 ಕೋಟಿ ‘ಕಬ್ಜ’ ಕಲೆಕ್ಷನ್!

ಹ್ಯಾಟ್ರಿಕ್ ಹೀರೋ ಶಿವಣ್ಣ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ಕಬ್ಜ’ ಸಿನಿಮಾ ಸಖತ್ ಕಮಾಲ್ ಮಾಡ್ತಿದೆ. ಆರ್.ಚಂದ್ರು ನಿರ್ದೇಶನದ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲೂ ಧೂಳೆಬ್ಬಿಸುತ್ತಿದೆ.  ಅದ್ರಲ್ಲೂ ಈಗ ಕಾಂತಾರ ಮತ್ತು ಕೆಜಿಎಫ್ 1 ಚಿತ್ರಕ್ಕಿಂತ ಹೆಚ್ಚು ಗಳಿಕೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಗಾಂಧಿನಗರದ ಲೆಕ್ಕಾಚಾರದ ಪ್ರಕಾರ ಮೊದಲ ದಿನದ ಕಲೆಕ್ಷನ್ (Collection) ಬರೋಬ್ಬರಿ 50 ಕೋಟಿ ಎಂದು ಅಂದಾಜಿಸಲಾಗಿದೆ. ಇದು ಭಾರತೀಯ ಸಿನಿಮಾ ರಂಗದಲ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದೆ.

ಇದನ್ನೂ ಓದಿ : ವಿಶ್ವದೆಲ್ಲೆಡೆ ಕಬ್ಜ ಹವಾ – 50 ದೇಶ, 4,000 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಅಬ್ಬರ

ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗ್ತಿದ್ದು, ಹತ್ತು ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ನಿನ್ನೆ ಸಿನಿಮಾ ಬಿಡುಗಡೆಯಾದಾಗ ರೆಸ್ಪಾನ್ಸ್ ಕಡಿಮೆ ಇದೆ ಎಂದು ಹೇಳಲಾಗುತ್ತಿತ್ತು. ಆದರೆ ಸಂಜೆ ವೇಳೆಗೆ ಎಲ್ಲಾ ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿವೆ. ಮಧ್ಯಾಹ್ನದಿಂದ ಥಿಯೇಟರ್ ಸಂಖ್ಯೆ ಹಾಗೂ ಶೋಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹೀಗಾಗಿ ಸಿನಿಮಾ ಬಾಕ್ಸಾಫೀಸ್ ನಲ್ಲಿ ಲೂಟಿ ಮಾಡ್ತಿದೆ.

ಉಪೇಂದ್ರ (Upendra) ಅವರು ಸ್ವತಃ ನಿರ್ದೇಶಕರಾಗಿದ್ದರೂ ಮೇಕಿಂಗ್ ಬಗ್ಗೆ ಮಾತನಾಡಿತ್ತಾರೆ. ಹಾಗೇ ಭಾರತೀಯ ಸಿನಿಮಾ ರಂಗಕ್ಕೆ ಮತ್ತೊಬ್ಬ ಅದ್ಭುತ ನಿರ್ದೇಶಕ ಸಿಕ್ಕಿದ್ದಾರೆ ಎಂದು ಆರ್.ಚಂದ್ರುರನ್ನು ಹಾಡಿ  ಹೊಗಳಿದ್ದಾರೆ. ಬಾಲಿವುಡ್ ನಲ್ಲೂ ಕಬ್ಜ ಸಿನಿಮಾಗೆ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಅನುಪಮ್ ಖೇರ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಂದು (ಮಾರ್ಚ್ 18) ಹಾಗೂ ನಾಳೆ (ಮಾರ್ಚ್​ 19) ವೀಕೆಂಡ್ ಇರುವುದರಿಂದ ಮತ್ತಷ್ಟು ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ, ಸಿನಿಮಾ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎನ್ನಲಾಗುತ್ತಿದೆ. ಮುಂದಿನ ಬುಧವಾರ (ಮಾರ್ಚ್​ 22) ಯುಗಾದಿ ಹಬ್ಬ ಇದ್ದು, ಆ ಪ್ರಯುಕ್ತ ಸರ್ಕಾರಿ ರಜೆ ಇದೆ. ಅದು ಕೂಡ ಚಿತ್ರಕ್ಕೆ ವರದಾನವಾಗಿದೆ. ಉಪೇಂದ್ರ, ಸುದೀಪ್, ಶಿವರಾಜ್​ಕುಮಾರ್ ಅವರಿಗೆ ಪರಭಾಷೆಗಳಲ್ಲೂ ಅಭಿಮಾನಿಗಳಿದ್ದಾರೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ಎಷ್ಟಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

suddiyaana