ಥಿಯೇಟರ್ ಗಳನ್ನು “ಕಬ್ಜ” ಮಾಡಲು ಮುಹೂರ್ತ ಫಿಕ್ಸ್ – ಅಪ್ಪು ಬರ್ತಡೇಯಂದೇ ಪರಾಕ್!

ಥಿಯೇಟರ್ ಗಳನ್ನು “ಕಬ್ಜ” ಮಾಡಲು ಮುಹೂರ್ತ ಫಿಕ್ಸ್ – ಅಪ್ಪು ಬರ್ತಡೇಯಂದೇ ಪರಾಕ್!

ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶದಾದ್ಯಂತ ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ವಿಶ್ವದಾದ್ಯಂತ ಅದ್ದೂರಿಯಾಗಿ ಸಿನಿಮಾ ತೆರೆಗೆ ಬರಲಿದೆ.

ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ  ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ಹಾಗೂ ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”. ಈ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡುತ್ತಿದ್ದ ಪ್ರೋತ್ಸಾಹ ಅಪಾರ. ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದಾಗ ಹಾಲಿವುಡ್ ಚಿತ್ರ ಇದ್ದ ಹಾಗೆ ಇದೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದರಂತೆ. ಹಾಗಾಗಿ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ದಿನದಂದೇ ಅಂದ್ರೆ, ಇದೇ ಮಾರ್ಚ್ 17 ರಂದು ಬಿಡುಗಡೆಯಾಗಲಿದೆ ಅಂತ ಚಿತ್ರ ತಂಡ ಘೋಷಿಸಿದೆ.

ಇದನ್ನೂ ಓದಿ:ದೇಹದ ಮೇಲೆ 30 ಸಾವಿರ ಹರಳು – ಗಾಯಕಿ ಡ್ರೆಸ್ ಗೆ ಫ್ಯಾನ್ಸ್ ಮರುಳು!

“ಸಹೃದಯಿ, ಅಭಿಮಾನಿಗಳ ಪಾಲಿಗಂತೂ ದೇವರೇ ಆಗಿರುವ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ನಮ್ಮ “ಕಬ್ಬ” ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಹೊಸವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲೇ ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ‌.

ಪುನೀತ್ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವ ನೋವನ್ನು ಮರೆಯೋದು ಅಭಿಮಾನಿಗಳಿಗೆ ಕಷ್ಟ ಆಗುತ್ತಿದೆ. ಅವರನ್ನು ಹಲವು ರೀತಿಯಲ್ಲಿ ನೆನಪು ಮಾಡಿಕೊಳ್ಳಲಾಗುತ್ತಿದೆ. ಕಳೆದ ವರ್ಷ ಅವರ ಹುಟ್ಟುಹಬ್ಬದಂದು  ‘ಜೇಮ್ಸ್​’ ಸಿನಿಮಾ ರಿಲೀಸ್ ಆಗಿತ್ತು. ಈ ವರ್ಷ ‘ಕಬ್ಜ’ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ. ಮಾರ್ಚ್​ 22ರಂದು ಯುಗಾದಿ ಇದೆ. ಈ ಕಾರಣದಿಂದಲೂ ‘ಕಬ್ಜ’ ಚಿತ್ರವನ್ನು ಮಾರ್ಚ್​ 17ಕ್ಕೆ ರಿಲೀಸ್ ಮಾಡಲಾಗುತ್ತಿದೆ ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ.

suddiyaana