ಇಂದು ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತನಾಗ್ – ‘ಕಮಲ’ ಸೇರ್ಪಡೆ ಹಿಂದಿನ ಲೆಕ್ಕಾಚಾರವೇನು..?

ಇಂದು ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತನಾಗ್ – ‘ಕಮಲ’ ಸೇರ್ಪಡೆ ಹಿಂದಿನ ಲೆಕ್ಕಾಚಾರವೇನು..?

ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಹಿರಿಯ ನಟ ಅನಂತನಾಗ್ ಮತ್ತೊಮ್ಮೆ ರಾಜಕೀಯ ಅದೃಷ್ಟ ಪರೀಕ್ಷೆಗೆ ಮುಂದಾದಂತಿದೆ. ಈಗಾಗ್ಲೇ ಶಾಸಕರಾಗಿ, ಪರಿಷತ್ ಸದಸ್ಯರಾಗಿ, ಸಚಿವರಾಗಿಯೂ ಅನುಭವ ಹೊಂದಿರುವ ಅನಂತ್ ನಾಗ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ : ‘ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ ನೋಡೋಣ’ – ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅನಂತನಾಗ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅನಂತನಾಗ್ ಈ ಹಿಂದೆ 1996 ರಲ್ಲಿ ಜೆ.ಹೆಚ್ ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್​ ಸದಸ್ಯರಾಗಿಯೂ ಅನುಭವ ಹೊಂದಿದ್ದಾರೆ. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​​ನಿಂದ ಸ್ಪರ್ಧಿಸಿ ಎಸ್​.ಎಂ ಕೃಷ್ಣ ವಿರುದ್ಧ ಸೋಲನುಭವಿಸಿದ್ದರು.

74 ವರ್ಷದ ಅನಂತನಾಗ್ ಬಿಜೆಪಿ ಪಾಲಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಲಿದ್ದಾರೆ. ಆದ್ರೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದು ಅನುಮಾನವಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಈಗಾಗ್ಲೇ ಮೂರೂ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಕೂಡ ಜೋರಾಗಿದೆ. ಇದ್ರ ನಡುವೆಯೇ ಅನಂತನಾಗ್ ಬಿಜೆಪಿ ಸೇರಿಕೊಳ್ಳುತ್ತಿರೋದು ಬಾರೀ ಕುತೂಹಲ ಮೂಡಿಸಿದೆ.

suddiyaana