ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್!‌ – ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್!‌ – ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

ನಟ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ   ನಿಧನರಾಗಿದ್ದಾರೆ. ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಿದೆ. ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಇದನ್ನೂ ಓದಿ: ಸಿಲಿಕಾನ್‌ ಸಿಟಿ ಮಂದಿಗೆ ರಾಜ್ಯ‌ ಸರ್ಕಾರದಿಂದ ಗುಡ್‌ನ್ಯೂಸ್! – 6ನೇ ಗ್ಯಾರೆಂಟಿ ಘೋಷಣೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌!

ರಾಮನಗರ ತಾಲೂಕಿನ ಗುನ್ನೂರು ಬಳಿಯ ಫಾರ್ಮ್‌ ಹೌಸ್‌ನಲ್ಲಿ ದಿಲೀಪ್‌ ಅವರ ಅಂತ್ಯಕ್ರಿಯೆ ನಡೆಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ, ದಿಲೀಪ್ ರಾಜ್ ಅಣ್ಣನ ಮಗನಿಂದ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

ಕಳೆದ 10 ವರ್ಷಗಳ ಹಿಂದೆ ನಟ ದಿಲೀಪ್‌ ರಾಜ್‌ ಅವರು ರಾಮನಗರ ತಾಲೂಕಿನ ಗುನ್ನೂರಿನಲ್ಲಿ ಜಮೀನು ಖರೀದಿಸಿದ್ರು. ಬಳಿಕ ತೋಟ ನಿರ್ಮಾಣ ಮಾಡಿ ಅಲ್ಲೇ ಸುಂದರವಾದ ಮನೆ ಕಟ್ಟಿಸಿದ್ರು. ಸಮಯ ಸಿಕ್ಕಾಗಲೆಲ್ಲಾ ಇಲ್ಲಿನ ತೋಟದ ಮನೆಗೆ ದಿಲೀಪ್ ರಾಜ್‍ ಬರುತ್ತಿದ್ದರು. ಹಳೇ ಶೈಲಿಯಲ್ಲಿ ತೊಟ್ಟಿ ಮನೆ ನಿರ್ಮಾಣ ಮಾಡಿಕೊಂಡಿದ್ದರು. ಗ್ರಾಮಸ್ಥರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದರು. ಹೀಗಾಗಿ ಇಲ್ಲೇ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

ದಿಲೀಪ್ ರಾಜ್ ಅಂತ್ಯಕ್ರಿಯೆಯಲ್ಲಿ ನಟ ಸೃಜನ್ ಲೋಕೇಶ್, ನಟಿ ಅನುಪ್ರಭಾಕರ್, ರಘುಮುಖರ್ಜಿ, ಕಾಮಿಡಿ ಕಿಲಾಡಿ ಖ್ಯಾತಿಯ ಜಗಪ್ಪ, ಸೃಜನ್, ಮಂಜುಪಾವಗಡ, ಹುಲಿ ಕಾರ್ತಿಕ್ ಸೇರಿ ಕಿರುತೆರೆ ಕಲಾವಿದರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಭಾಗಿಯಾಗಿದ್ದರು. ಈ ವೇಳೆ ಪಾರ್ಥಿವ ಶರೀರದ ಎದುರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Shwetha M