ಇಂದೇ ನಟ ದಿಲೀಪ್‌ ರಾಜ್‌ ಅಂತ್ಯಕ್ರಿಯೆ – ರಾಮನಗರದ ಫಾರ್ಮ್‌ಹೌಸ್‌ನಲ್ಲಿ AJ ಅಂತಿಮ ವಿಧಿವಿಧಾನ!

ಇಂದೇ ನಟ ದಿಲೀಪ್‌ ರಾಜ್‌ ಅಂತ್ಯಕ್ರಿಯೆ – ರಾಮನಗರದ ಫಾರ್ಮ್‌ಹೌಸ್‌ನಲ್ಲಿ AJ ಅಂತಿಮ ವಿಧಿವಿಧಾನ!

ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್‌ ರಾಜ್‌ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇಂದು ಮುಂಜಾನೆ ದಿಲೀಪ್‌ ರಾಜ್‌ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. ಇದೀಗ ನಟನ ಅಂತ್ಯಕ್ರಿಯೆಗೆ ಸಿದ್ದತೆ ನಡೆಯುತ್ತಿದೆ.

ಇದನ್ನೂ ಓದಿ: ದೇವರ ದರ್ಶನಕ್ಕೆ ಹೋದವರು ಮಸಣ ಸೇರಿದರು! – ದೇಗುಲದ ಕಾಂಪೌಂಡ್‌ ಗೋಡೆ ಕುಸಿತಕ್ಕೆ 6 ಮಂದಿ ಬಲಿ!

ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಹಾಗೆಯೇ ಚಿತ್ರರಂಗದ ಅನೇಕ ಗಣ್ಯರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ದಿಲೀಪ್‌ ರಾಜ್ ಅಂತ್ಯಕ್ರಿಯೆ ಸಂಜೆ ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಈಗಾಗಲೇ, ಕೆಲಸಗಾರರು ಹಾಗೂ ಗ್ರಾಮಸ್ಥರು ಗುಂಡಿತೋಡುವ ಕಾರ್ಯ ಆರಂಭಿಸಿದ್ದಾರೆ. ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

10 ವರ್ಷಗಳ ಹಿಂದೆ ನಟ ದಿಲೀಪ್ ರಾಜ್ 1 ಎಕರೆ ಜಮೀನು ಖರೀದಿಸಿದ್ದರು. ಅಲ್ಲಿ ತೋಟ ನಿರ್ಮಾಣ ಮಾಡಿಕೊಂಡಿದ್ದರು. ಬಳಿಕ ಮನೆ ಕಟ್ಟಿದ್ದರು. ತಿಂಗಳಿಗೊಮ್ಮೆ ಫಾರ್ಮ್‌ಹೌಸ್‌ಗೆ ಭೇಟಿ ನೀಡುತ್ತಿದ್ದರು. ಅಲ್ಲಿ ಕೆಲ ಕಾಲ ಸಮಯಕಳೆಯುತ್ತಿದ್ದರು. ಆದ್ರೀಗ ನಟ ದಿಲೀಪ್‌ ರಾಜ್‌ ನಿಧನರಾಗಿದ್ದಾರೆ. ಇದೀಗ ಅದೇ ಜಾಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇನ್ನು ದಿಲೀಪ್ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟ ರಿಷಬ್ ಶೆಟ್ಟಿ, ದಿಲೀಪ್‌ ರಾಜ್‌ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ರಿಷಬ್‌ ಶೆಟ್ಟಿ ಒಳ್ಳೆಯ ನಟ, ನಿರ್ದೇಶಕ, ನಿರ್ಮಾಪಕ ಅಲ್ಲದಕ್ಕೂ ಮಿಗಿಲಾಗಿ ಒಬ್ಬ ಒಳ್ಳೆಯ ಮನುಷ್ಯ. ಭೇಟಿಯಾದ ಸಂದರ್ಭಗಳು ಬೆರಳೆಣಿಕೆಯಷ್ಟಾದರೂ ಮನಸ್ಸಿನಲ್ಲಿ ಕೂತ ವ್ಯಕ್ತಿತ್ವದ ಭಾವ ಮಾಸಿಹೋಗಲಾರದು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ.

Shwetha M