ಬಿಗ್ ಬಾಸ್ ಮನೆಗೆ ಬೀಗ – 2 ವಾರಕ್ಕೆ ಶೋ ಬಂದ್

ಬಿಗ್ಬಾಸ್ ಕನ್ನಡ ರಿಯಾಲಿಟಿ ಶೋ ನಡೆಯುವ ಬಿಡದಿ ಸಮೀಪದ ಇನೋವೇಟಿವ್ ಫಿಲ್ಮಂ ಸಿಟಿಯ ಜಾಲಿವುಡ್ ಸ್ಟೂಡಿಯೋಗೆ ಪೊಲೀಸರ ಸಮ್ಮುಖದಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ದಕ್ಷಿಣ ಜಿಲ್ಲಾಡಳಿತದಿಂದ ಬೀಗ ಜಡಿಯಲಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12 ರ ಎರಡನೇ ವಾರಕ್ಕೆ ಕಾಲಿಡುತ್ತಿದ್ದಂತೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಶೋ ನಡೆಯುತ್ತಿರುವ ವೆಲ್ಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೇನ್ಮೆಂಟ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಿತ್ತು. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಈ ಸ್ಟುಡಿಯೋ, ಕೊಳಚೆ ನೀರನ್ನು ಸಂಸ್ಕರಿಸದೆ ನೇರವಾಗಿ ಮೋರಿಗೆ ಹರಿಬಿಡುತ್ತಿದೆ. ಇದು ಜಲ ಮಾಲಿನ್ಯ ನಿಯಂತ್ರಣ ಮತ್ತು ಸಂರಕ್ಷಣೆ ಕಾಯ್ದೆ 1974ರ ಉಲ್ಲಂಘನೆ ಹಿನ್ನೆಲೆಯಲ್ಲಿ, ಸ್ಟುಡಿಯೋವನ್ನು ಮುಚ್ಚಲು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಆದೇಶಿಸಿತ್ತು.
ಇದನ್ನೂ ಓದಿ: ಬಿಹಾರದಲ್ಲಿ ಡಿಲಿಟ್ ಮಾಡಿದ ಮಾಹಿತಿ ಕೊಡಿ ಎಂದ ಸುಪ್ರೀಂ – ಆಗಲ್ಲ ಎಂದ ಚುನಾವಣಾ ಆಯೋಗ
ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಮನೆ ನಿರ್ಮಿಸಲಾಗಿದೆ. ಈ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ. ಹೀಗಾಗಿ ಮಂಗಳವಾರ ಸಂಜೆ ರಾಮನಗರ ಜಿಲ್ಲಾಡಳಿತವು ಜಾಲಿವುಡ್ ಸ್ಟೂಡಿಯೋಗೆ ತೆರಳಿ ಹೊರ ಭಾಗದಿಂದ ಬೀಗ ಹಾಕಿದೆ. ಸ್ಥಳದಲ್ಲಿ ವಿವಿಧ ಕನ್ನಡ ಸಂಘಟನೆಗಳು ಕೂಡ ಹಾಜರಿದ್ದು, ಸ್ಟೂಡಿಯೋ ನಡೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ.
ಜಲ ಮಾಲಿನ್ಯ ನಿಯಂತ್ರಣ ಮತ್ತು ಸಂರಕ್ಷಣೆ ಕಾಯ್ದೆ 1974ರ ಉಲ್ಲಂಘನೆ ಮಾಡಿರುವ ಕಾರಣ, ವೆಲ್ಸ್ ಸ್ಟುಡಿಯೋಸ್ನವರು ತಮ್ಮ ಕಾರ್ಯಾಚರಣೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಬೇಕು ಎಂದು ನೋಟಿಸ್ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಅಲ್ಲದೆ, ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕೂಡಲೇ ಈ ಯುನಿಟ್ ಅನ್ನು ಜಪ್ತಿ ಮಾಡಬೇಕು ಮತ್ತು ಬೆಸ್ಕಾಂ ಅಧಿಕಾರಿಗಳು ತಕ್ಷಣವೇ ಈ ಸ್ಟುಡಿಯೋಗೆ ನೀಡಿರುವ ವಿದ್ಯುತ್ ಸಂಪರ್ಕವನ್ನು ನಿಲ್ಲಿಸಬೇಕು ಎಂದೂ ಸೂಚಿಸಲಾಗಿತ್ತು.

ನೋಡಿರಿ

