ನಾಯಿ ತಿನ್ನದೇ ಬಿಟ್ಟ ಬಿಸ್ಕತ್ತನ್ನು ತನ್ನ ಕಾರ್ಯಕರ್ತನಿಗೆ ಕೊಟ್ಟ ರಾಹುಲ್ ಗಾಂಧಿ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಈಗ ಒಡಿಶಾಗೆ ತಲುಪಿದೆ. ನೂರಾರು ಕಾರ್ಯಕರ್ತರ ಜೊತೆ ರಾಗಾ ಯಾತ್ರೆ ನಡೆಸುತ್ತಿದ್ದಾರೆ. ಇದೀಗ ರಾಹುಲ್ ಗಾಂಧಿ ಮತ್ತೊಂದು ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ರಾಹುಲ್ ಗಾಂಧಿ ಅವರು ನಾಯಿಗೆ ಹಾಕಿದ್ದ ಬಿಸ್ಕೆಟ್ ಅನ್ನು ಕಾರ್ಯಕರ್ತನಿಗೆ ನೀಡಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದನ್ನೂ ಓದಿ: ರಾಜ್ಯ ರಾಜಧಾನಿಯಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು – 6 ಮಂದಿ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಕೆ
ರಾಹುಲ್ ಗಾಂಧಿ ಅವರು ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರೋಡ್ ಶೋ ನಡೆಸುವಾಗ ಅವರ ಜತೆ ಒಂದು ನಾಯಿಯೂ ಇತ್ತು, ಅದಕ್ಕೆ ರಾಹುಲ್ ಗಾಂಧಿ ಬಿಸ್ಕತ್ತು ಹಾಕುತ್ತಿದ್ದರು, ಆದರೆ ಆ ನಾಯಿ ತಿನ್ನುತ್ತಿರಲಿಲ್ಲ, ಅದೇ ಸಮಯದಲ್ಲಿ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿಯನ್ನು ಮಾತನಾಡಿಸಿದರು ಆಗ ರಾಹುಲ್ ನಾಯಿಗೆ ಹಾಕಿದ್ದ ಬಿಸ್ಕತ್ತಲ್ಲೇ ಒಂದು ಬಿಸ್ಕತ್ತನ್ನು ತೆಗೆದು ಕಾರ್ಯಕರ್ತನಿಗೆ ನೀಡಿದ್ದರು. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬಿಜೆಪಿ ಐಟಿ ಸೆಲ್ನ ಅಮಿತ್ ಮಾಳವೀಯ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೂತ್ ಏಜೆಂಟರನ್ನು ನಾಯಿಗಳಿಗೆ ಹೋಲಿಸಿದ್ದರು. ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷರು ತನ್ನ ಕಾರ್ಯಕರ್ತನನ್ನು ನಾಯಿಯಂತೆ ನಡೆಸಿಕೊಂಡರೆ ಅಂತಹ ಪಕ್ಷವು ಕಣ್ಮರೆಯಾಗುವುದು ಪಕ್ಕಾ ಎಂದು ಮಾಳವೀಯ ಬರೆದಿದ್ದಾರೆ.
ಈ ಘಟನೆ ವ್ಯಾಪಕ ಟೀಕೆಗೆ ಕಾರಣವಾಗಿದ್ದು, ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ವಿಚಾರವನ್ನು ಮುನ್ನೆಲೆಗೆ ತಂದಿದೆ. ಇದು ತನ್ನದೇ ಸದಸ್ಯರ ಬಗ್ಗೆ ನಾಯಕತ್ವದ ವರ್ತನೆ ಮತ್ತು ಅವರ ಕಡೆಗೆ ತೋರುವ ಗೌರವದ ಕೊರತೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ.
ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತನಿಗೆ ನಾಯಿ ತಿರಸ್ಕರಿಸಿದ ಬಿಸ್ಕತ್ತನ್ನು ನೀಡಿದ್ದಾರೆ. ಇದು ಅವರ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ಮತದಾರರಿಗೆ ನೀಡುವ ಗೌರವವೇ ಎಂದು ಬಿಜೆಪಿ ನಾಯಕಿ ಪಲ್ಲವಿ ಟೀಕಿಸಿದ್ದಾರೆ.
ಇನ್ನು ಪಲ್ಲವಿ ಅವರ ಟ್ವೀಟ್‌ಗೆ ಹಿಮಂತ ಬಿಸ್ವಾ ಶರ್ಮಾ ಕೂಡ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಮಾತ್ರವಲ್ಲ, ಅವರ ಇಡೀ ಕುಟುಂಬವೂ ನನಗೆ ಆ ಬಿಸ್ಕತ್ತನ್ನು ತಿನ್ನಿಸಲು ಸಾಧ್ಯವಾಗಲಿಲ್ಲ. ನಾನು ಹೆಮ್ಮೆಯ ಅಸ್ಸಾಮಿ ಮತ್ತು ಭಾರತೀಯ. ನಾನು ಅದನ್ನು ತಿನ್ನಲು ನಿರಾಕರಿಸಿದೆ ಮತ್ತು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ.