ಕರ್ನಾಟಕಕ್ಕೆ 50ರ ಸಂಭ್ರಮ – ನವೆಂಬರ್ 1 ರಂದೇ ಕನ್ನಡ ರಾಜ್ಯೋತ್ಸವ ಆಚರಣೆ ಏಕೆ? ಇಲ್ಲಿದೆ ಮಹತ್ವದ ಮಾಹಿತಿ..

ಕರ್ನಾಟಕಕ್ಕೆ 50ರ ಸಂಭ್ರಮ – ನವೆಂಬರ್ 1 ರಂದೇ ಕನ್ನಡ ರಾಜ್ಯೋತ್ಸವ ಆಚರಣೆ ಏಕೆ? ಇಲ್ಲಿದೆ ಮಹತ್ವದ ಮಾಹಿತಿ..

ಇವತ್ತು ನವೆಂಬರ್ 1. ರಾಜ್ಯದಾದ್ಯಂತ 68 ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಪ್ರತಿ ಕನ್ನಡಿಗನ, ಕರುನಾಡಿನ ಹೆಮ್ಮೆಯ ದಿನ ಕನ್ನಡ ರಾಜೋತ್ಸವ. ಕರ್ನಾಟಕವನ್ನು ಮೊದಲು ಮೈಸೂರು ಪ್ರಾಂತ್ಯವಾಗಿತ್ತು. 1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಅಂದಿನ ಮೈಸೂರು ಮಹಾರಾಜರಾಗಿದ್ದ ಒಡೆಯರ್ ಅವರು ತಮ್ಮ ರಾಜ್ಯವನ್ನು ಭಾರತ ದೇಶದೊಂದಿಗೆ ವಿಲೀನ ಮಾಡಲು ಒಪ್ಪಿದರು. ಹೀಗಾಗಿ ಮೈಸೂರು 1950 ರಲ್ಲಿ ಭಾರತದ ಒಂದು ರಾಜ್ಯವಾಯಿತು.

ಭಾರತ ದೇಶದಲ್ಲಿ ರಾಜ್ಯಗಳ ವಿಲೀನಿಕರಣ ಪ್ರಕ್ರಿಯೆಯು 19ನೇ ಶತಮಾನದ ಮಧ್ಯಭಾಗದಲ್ಲಿ ಆರಂಭಗೊಂಡಿತು. ನಂತರ 1956ರಲ್ಲಿ ರಾಜ್ಯವು ಪುನರ್ವಿಗಂಡನಾ ಕಾಯ್ದೆಯ ಜಾರಿಯೊಂದಿಗೆ ಈ ಪ್ರಕ್ರಿಯೆ ಮುಕ್ತಯವಾಯಿತು. ಕೂರ್ಗ್‌, ಮದರಾಸು, ಹೈದರಾಬಾದ್ ಮತ್ತು ಬಾಂಬೆ ಸಂಸ್ಥಾನದ ಕೆಲ ಪ್ರದೇಶಗಳು ಈ ಪ್ರಕ್ರಿಯೆಯಲ್ಲಿ ಮೈಸೂರು ರಾಜ್ಯಕ್ಕೆ ಸೇರಿಸಲ್ಪಟ್ಟವು.

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡದ 5 ಗೀತೆಗಳ ಗಾಯನ ಕಡ್ಡಾಯ – ರಾಜ್ಯ ಸರ್ಕಾರ ಆದೇಶ!

ದಕ್ಷಿಣ ಭಾರತದಲ್ಲಿ ಹರಡಿದ್ದ ಕನ್ನಡ ಭಾಷಿಕರ ಎಲ್ಲ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವು 1956 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಕರ್ನಾಟಕ ಹುಟ್ಟಿಗೆ ಆಲೂರು ವೆಂಕಟರಾವ್‌ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905 ರಲ್ಲಿ ಆರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 01 ರಂದು ರಾಜ್ಯಗಳನ್ನು ವಿಂಗಡಿಸಿದರು.

ಉತ್ತರ ಕರ್ನಾಟಕದ ಜನರು ಮೈಸೂರು ಹೆಸರನ್ನು ಉಳಿಸಿಕೊಳ್ಳಲು ಒಲವು ತೋರಲಿಲ್ಲ. ಏಕೆಂದರೆ ಇದು ಹಿಂದಿನ ಸಂಸ್ಥಾನದ ಮತ್ತು ಹೊಸ ರಾಜ್ಯದ ದಕ್ಷಿಣ ಪ್ರದೇಶಗಳೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಈ ತರ್ಕಕ್ಕೆ ಅನುಗುಣವಾಗಿ, ರಾಜ್ಯದ ಹೆಸರನ್ನು ಕರ್ನಾಟಕ ಎಂದು ನವೆಂಬರ್ 1 ರಂದು 1973 ರಂದು ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್‌ ಅರಸು ರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಕರ್ನಾಟಕ ಹೆಸರು ಬಂದಿದ್ದು ಹೇಗೆ?

ಕರ್ನಾಟಕ ಪದದ ಮೂಲ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಇನ್ನೂ ಹಲವು ಅಭಿಪ್ರಾಯಗಳು ಇವೆ. ಕರು + ನಾಡು = ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ. ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದೂ ಸಹ ಹೇಳಲಾಗುತ್ತದೆ. ಹಳೆಯ ಗ್ರಂಥಗಳು ಇದನ್ನು ಕರ್ನಾಟ ಎಂಬ ಪದದಿಂದ ಪಡೆಯಲಾಗಿದೆ ಎಂದು ಸೂಚಿಸುತ್ತವೆ. ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸುತ್ತದೆ.

ಕರ್ನಾಟಕಕ್ಕೆ 50 ರ ಸಂಭ್ರಮ!

ಈ ಬಾರಿಯ ಕನ್ನಡ ರಾಜ್ಯೋತ್ಸವದ ಮತ್ತೊಂದು ವಿಶೇಷವೆಂದರೆ ಕರ್ನಾಟಕಕ್ಕೆ 50 ರ ಸಂಭ್ರಮ. ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ಇಂದಿಗೆ 50 ವರ್ಷ ಪೂರ್ಣಗೊಂಡಿದೆ.

ಭೌಗೋಳಿಕವಾಗಿ ಭಾರತದ 6ನೇ ಅತಿ ದೊಡ್ಡ ರಾಜ್ಯ

ಪಶ್ಚಿಮ ಘಟ್ಟಗಳಿಂದ ಸಮೃದ್ಧವಾಗಿರುವ ಕರ್ನಾಟಕ ರಾಜ್ಯವು ಭೌಗೋಳಿಕವಾಗಿ ಭಾರತದ ಆರನೇ ಅತಿ ದೊಡ್ಡ ಹಾಗೂ ಜನಸಂಖ್ಯೆ ಆಧಾರದಲ್ಲಿ ಎಂಟನೇ ಅತಿ ದೊಡ್ಡ ರಾಜ್ಯವಾಗಿದೆ.

ಹಳದಿಕೆಂಪು ಬಾವುಟ

ಕರ್ನಾಟಕ ರಾಜ್ಯವು ತನ್ನದೆ ಆದ ಬಾವುಟವನ್ನು ಹೊಂದಿದೆ. ಹಳದಿ- ಕೆಂಪು ಬಣ್ಣದ ಸಾಂಸ್ಕೃತಿಕ ಬಾವುಟವನ್ನು ಹೊಂದಿದೆ. ಕನ್ನಡ ಹೋರಾಟಗಾರ ಎಂ ರಾಮಮೂರ್ತಿಯವರು ಈ ಹಳದಿ -ಕೆಂಪು ಬಾವುಟವನ್ನು ಪ್ರಥಮ ಬಾರಿಗೆ ತಯಾರಿಸಿ, ಬಳಸಿದ್ದರು.

Shwetha M