ಒಂದೇ ವರ್ಷದಲ್ಲಿ 3 ದ್ವಿಶತಕ ಸಿಡಿಸಿದ ಕನ್ನಡಿಗ – ಸ್ಮರಣ್ ರವಿಚಂದ್ರನ್ ಬೊಂಬಾಟ್ ಬ್ಯಾಟಿಂಗ್

ರಣಜಿ ಟೂರ್ನಿಯಲ್ಲಿ ಕರ್ನಾಟಕದ ಸ್ಮರಣ್ ರವಿಚಂದ್ರನ್ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಹುಬ್ಬಳ್ಳಿಯ ಕೆಎಸ್ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ ಪಂದ್ಯದಲ್ಲಿ ಕರ್ನಾಟಕ ತಂಡದ ಪರ ಕಣಕ್ಕಿಳಿದ ಸ್ಮರಣ್ ರವಿಚಂದ್ರನ್ ಡಬಲ್ ಸೆಂಚುರಿ ಸಿಡಿಸುವ ಮೂಲಕ ಮತ್ತೊಮ್ಮೆ ಅಬ್ಬರ ಮೆರೆದಿದ್ದಾರೆ.
ಇದನ್ನೂ ಓದಿ:ರುತುರಾಜ್ ಗಾಯಕ್ವಾಡ್ CSK ಕ್ಯಾಪ್ಟನ್ – ರಾಜಸ್ಥಾನ್ ರಾಯಲ್ಸ್‌ಗೆ ಕುಮಾರ ಸಂಗಕ್ಕಾರ ಹೆಡ್ ಕೋಚ್
ಚಂಡೀಗಢ್ ವಿರುದ್ಧ ಕಣಕ್ಕಿಳಿದ ಕರ್ನಾಟಕ ತಂಡದ ಪರ ಸ್ಮರಣ್ ರವಿಚಂದ್ರನ್ ದ್ವಿಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಮರಣ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಈ ಪಂದ್ಯದಲ್ಲಿ 362 ಎಸೆತಗಳನ್ನು ಎದುರಿಸಿದ ಸ್ಮರಣ್ ರವಿಚಂದ್ರನ್ 16 ಫೋರ್ ಹಾಗೂ 2 ಸಿಕ್ಸ್ಗಳೊಂದಿಗೆ ಅಜೇಯ 227 ರನ್ ಬಾರಿಸಿದರು. ಈ ಭರ್ಜರಿ ದ್ವಿಶತಕದ ನೆರವಿನೊಂದಿಗೆ ಕರ್ನಾಟಕ ತಂಡ ಮೊದಲ ಇನಿಂಗ್ಸ್ನಲ್ಲಿ 8 ವಿಕೆಟ್ ಕಳೆದುಕೊಂಡು 547 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ.
ಸ್ಮರಣ್ ರವಿಚಂದ್ರನ್ ಅವರು ಈ ವರ್ಷದಲ್ಲೇ ಸಿಡಿಸಿರುವ ಮೂರನೇ ಡಬಲ್ ಸೆಂಚುರಿ ಇದು. ಇದಕ್ಕೂ ಮುನ್ನ ಕೇರಳ ವಿರುದ್ಧದ ಪಂದ್ಯದಲ್ಲೂ ಅಜೇಯ 220 ರನ್ ಬಾರಿಸಿ ಮಿಂಚಿದ್ದರು. ಅಲ್ಲದೆ ಜನವರಿಯಲ್ಲಿ ನಡೆದ ಕಳೆದ ಸೀಸನ್ನ ರಣಜಿ ಟೂರ್ನಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ 203 ರನ್ ಗಳಿಸಿದ್ದರು. ಇದೀಗ ಮೂರನೇ ದ್ವಿಶತಕದೊಂದಿಗೆ ಸ್ಮರಣ್ ರವಿಚಂದ್ರನ್ ಫಸ್ಟ್ ಕ್ಲಾಸ್ ಕ್ರಿಕೆಟ್ನಲ್ಲಿ 1000 ರನ್ ಪೂರೈಸಿದ್ದಾರೆ.
ಕರ್ನಾಟಕ ಪರ ಈವರೆಗೆ 13 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ 22 ವರ್ಷದ ಸ್ಮರಣ್ ರವಿಚಂದ್ರನ್ 3 ದ್ವಿಶತಕ, 1 ಶತಕ ಹಾಗು 3 ಅರ್ಧಶತಕಗಳೊಂದಿಗೆ ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ತನ್ನ ಪ್ರಥಮ ದರ್ಜೆ ಕೆರಿಯರ್ನಲ್ಲಿ ಅದ್ಭುತ ಆರಂಭ ಪಡೆದುಕೊಂಡಿದ್ದಾರೆ. ಇತ್ತ ಟಿ20 ಕ್ರಿಕೆಟ್ನಲ್ಲೂ ಸ್ಮರಣ್ ಕಡೆಯಿಂದ ಅದ್ಭುತ ಪ್ರದರ್ಶನವೇ ಮೂಡಿ ಬರುತ್ತಿದೆ. ಈವರೆಗೆ 6 ಟಿ20 ಪಂದ್ಯಗಳನ್ನಾಡಿರುವ ಯುವ ಎಡಗೈ ದಾಂಡಿಗ ಒಂದು ಅರ್ಧಶತಕದೊಂದಿಗೆ 170 ರನ್ ಕಲೆಹಾಕಿದ್ದಾರೆ. ಇದೇ ಕಾರಣದಿಂದಾಗಿ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಸ್ಮರಣ್ ರವಿಚಂದ್ರನ್ ಅವರನ್ನು ಮುಂದಿನ ಸೀಸನ್ಗಾಗಿ ರಿಟೈನ್ ಮಾಡಿಕೊಂಡಿದೆ. ಅದರಂತೆ ಐಪಿಎಲ್ 2026 ರಲ್ಲಿ ಕರ್ನಾಟಕದ ಯುವ ಎಡಗೈ ದಾಂಡಿಗ ಸನ್ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ.

ನೋಡಿರಿ

