11 ದಿನ.. 655 ಕೋಟಿ ಕಲೆಕ್ಷನ್! – ಗಲ್ಲಾಪೆಟ್ಟಿಗೆ ದಾಖಲೆಗಳನ್ನ ಉಡೀಸ್ ಮಾಡಿದ ಕಾಂತಾರ ಚಾಪ್ಟರ್ 1

ವಿಜಯ್ ಕಿರಗಂದೂರು ನಿರ್ಮಾಣದ ಕಾಂತಾರ ಚಾಪ್ಟರ್ 1 ಸಿನಿಮಾ ವಿಶ್ವದಾದ್ಯಂತ ಅಬ್ಬರಿಸುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದ್ದು, ದಿನದಿಂದ ದಿನಕ್ಕೆ ಕೋಟಿ-ಕೋಟಿಯನ್ನ ತನ್ನ ಕದಂಬ ಬಾಹುವಿನಿಂದ ಬಾಚಿಕೊಳ್ಳುತ್ತಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾ 655 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.
ಇದನ್ನೂ ಓದಿ: ದಾಸನಿಗೆ ತಪ್ಪದ ಸಂಕಷ್ಟ – ದರ್ಶನ್‌ಗೆ ಮತ್ತೆ ಕಾಣಿಸಿಕೊಂಡ ಬೆನ್ನುನೋವು!
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ವಿಶ್ವದಾದ್ಯಂತ ಅಬ್ಬರಿಸುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲೂ ಕಮಾಲ್ ಮಾಡ್ತಿದೆ. ಕಾಂತಾರ ಚಾಪ್ಟರ್-1 ಸಿನಿಮಾವನ್ನ ಒಂದು ಕೋಟಿಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಕೇವಲ 11 ದಿನಗಳಲ್ಲಿ ವಿಶ್ವದಾದ್ಯಂತ ಕಾಂತಾರ ಸಿನಿಮಾ 655 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಭಾರತೀಯ ಸಿನಿಮಾ ಇಂಡಸ್ಟ್ರಿ ಹುಬ್ಬೇರಿಸುವಂತೆ ಮಾಡಿದೆ.
ಇನ್ನು ಕರ್ನಾಟಕದಲ್ಲೂ ಕಾಂತಾರ ಚಾಪ್ಟರ್-1 ತೆರೆಮೇಲೆ ಅಬ್ಬರಿಸ್ತಿದೆ.ರಾಜ್ಯದಲ್ಲೂ 11 ದಿನಗಳಲ್ಲಿ 191 ಕೋಟಿಗೂ ಅಧಿಕ ಗಳಿಕೆ ಮಾಡಿದೆ ಕಾಂತಾರ ಚಾಪ್ಟರ್ 1 ಸಿನಿಮಾ. ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನೇನು ದೀಪಾವಳಿ ಹಬ್ಬದ ರಜಾದಿನಗಳು ಬಂದರೆ ಕಾಂತಾರ ಸಿನಿಮಾ ಮತ್ತಷ್ಟು ಕಲೆಕ್ಷನ್ ಮಾಡಲಿದೆ. ಅಲ್ಲಿಗೆ 1,000 ಕೋಟಿ ಟಾರ್ಗೆಟ್ ಮುಟ್ಟುವ ನಿರೀಕ್ಷೆಗಳು ಸನಿಹದಲ್ಲಿವೆ. ಮುಂದಿನ ದಿನಗಳಲ್ಲಿ ಇನ್ನೆಷ್ಟು ಕೋಟಿಯನ್ನ ಕಬಳಿಸಲಿದೆ ಕಾಂತಾರ ಎನ್ನೋ ಕುತೂಹಲ ಶುರುವಾಗಿದೆ.

ನೋಡಿರಿ

