ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ಕಾಂತಾರ ಚಾಪ್ಟರ್ -1- ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ ರಿಷಭ್ ಶೆಟ್ಟಿ

ಕಾಂತಾರ ಚಾಪ್ಟರ್ 1 ಸಿನಿಮಾ ಕೇವಲ 2 ದಿನಗಳಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ 2 ಸಿನಿಮಾ ನಂತರ, ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿರುವ ಸಿನಿಮಾ ಇದಾಗಿದೆ.
ಇದನ್ನೂ ಓದಿ:ಮೊದಲ ದಿನವೇ ದಾಖಲೆ ಬರೆದ ಕಾಂತಾರ ಚಾಪ್ಟರ್ 1 – ಫಸ್ಟ್ ಡೇ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?
ಕಾಂತಾರ ಚಾಪ್ಟರ್ 1 ಸಿನಿಮಾ ಕೇವಲ ಎರಡೇ ದಿನದಲ್ಲಿ ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ರೀತಿಯ ಅಪರೂಪದ ಸಾಧನೆ ಮಾಡಿದ ಕನ್ನಡದ ಕೆಲವೇ ಚಿತ್ರಗಳ ಸಾಲಿಗೆ ಈ ಸಿನಿಮಾ ಕೂಡ ಸೇರ್ಪಡೆ ಆಗಿದೆ. ಈ ವರ್ಷದ ಎರಡನೇ 100 ಕೋಟಿ ರೂಪಾಯಿ ಕ್ಲಬ್ ಸಿನಿಮಾ ಇದು ಅನ್ನೋದು ವಿಶೇಷ. ಈ ಮೊದಲು ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಇಂತಹ ಸಾಧನೆ ಮಾಡಿತ್ತು.
ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಂ ಮೊದಲಾದವರು ನಟಿಸಿರೋ ‘ಕಾಂತಾರ: ಚಾಪ್ಟರ್ 1’ ಸಿನಿಮಾ ದಸರಾ ಪ್ರಯುಕ್ತ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಚಿತ್ರ ಮೊದಲ ದಿನ 62 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾ ಶುಕ್ರವಾರ 43.65 ಕೋಟಿ ರೂಪಾಯಿ ಗಳಿಕೆ ಮಾಡಿದೆ.
ಕಾಂತಾರ: ಚಾಪ್ಟರ್ 1 ಚಿತ್ರ ಮೊದಲ ದಿನ 62 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರಲ್ಲಿ ಕನ್ನಡದಿಂದ 20 ಕೋಟಿ ರೂಪಾಯಿ, ತೆಲುಗಿನಿಂದ 13 ಕೋಟಿ ರೂಪಾಯಿ, ಹಿಂದಿಯಿಂದ 18.5 ಕೋಟಿ ರೂಪಾಯಿ, ತಮಿಳಿನಿಂದ 5.5 ಕೋಟಿ ರೂಪಾಯಿ ಹಾಗೂ ಮಲಯಾಳಂನಿಂದ 5.25 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

ನೋಡಿರಿ

