ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ರಿಲೀಸ್ – ತೆರೆಮೇಲೆ ಚಮತ್ಕಾರ ಮಾಡಿದ ರಿಷಭ್ ಶೆಟ್ಟಿ!

ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾ ವಿಶ್ವದಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಿದೆ. ಮತ್ತೆ ತೆರೆಮೇಲೆ ದೈವ ದರ್ಶನ ಮಾಡಿಸಿ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದ್ದಾರೆ. 3 ವರ್ಷಗಳ ಹಿಂದಿನ ‘ಕಾಂತಾರ’ ಚಿತ್ರವನ್ನು ಮರೆಸುವಂತೆ ಪ್ರೀಕ್ವೆಲ್ ಕಟ್ಟಿಕೊಟ್ಟಿದ್ದಾರೆ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ.
ಇದನ್ನೂ ಓದಿ: ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ – ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು
ನಗರದ ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭವಾಗಿದೆ. ವೀರೇಶ್, ಸಂತೋಷ್ ಚಿತ್ರಮಂದಿರ ಹಾಗೂ ಹಲವು ಮಲ್ಟಿಪ್ಲೆಕ್ಸ್‌ಗಳಲ್ಲಿ 6:30ಕ್ಕೆ ಮೊದಲ ಶೋ ಶುರುವಾಗಿದೆ. ಕರ್ನಾಟಕದಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ 1 ಸಿನಿಮಾ ಬಿಡುಗಡೆಯಾಗಿದೆ. ಮೊದಲ ದಿನ ಎರಡು ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಾಣಲಿದೆ.
7,000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಕನ್ನಡ ಸೇರಿದಂತೆ ಸಪ್ತ ಭಾಷೆಗಳಲ್ಲಿ ಭಾರತ ಹಾಗೂ ಭಾರತದಾಚೆಗೂ ಸಿನಿಮಾ ಬಿಡುಗಡೆಯಾಗಲಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ತಮಿಳು ನಟ ಜಯರಾಂ ಸೇರಿದಂತೆ ಹಲವರು ಅಭಿನಯಿಸಿದ್ದಾರೆ.
ಕಾಂತಾರ 1 ಪ್ರೀಮಿಯರ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ನಟ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ಸ್ಟೋರಿ ಮತ್ತು ಮೇಕಿಂಗ್‌ನಲ್ಲಿ ರಿಷಬ್ ಶೆಟ್ಟಿ ಯಶಸ್ವಿಯಾಗಿದ್ದಾರೆಂಬ ಮಾತುಗಳು ಪ್ರೀಮಿಯರ್ ಶೋ ವೇಳೆ ಕೇಳಿಬಂದಿವೆ.

ನೋಡಿರಿ

