ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ರಿಷಬ್‌ ಶೆಟ್ಟಿ ಟೆಂಪಲ್‌ ರನ್!‌ – ಚಾಮುಂಡೇಶ್ವರಿ ದರ್ಶನ ಪಡೆದ ಡಿವೈನ್‌ ಸ್ಟಾರ್!‌

ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ರಿಷಬ್‌ ಶೆಟ್ಟಿ ಟೆಂಪಲ್‌ ರನ್!‌ – ಚಾಮುಂಡೇಶ್ವರಿ ದರ್ಶನ ಪಡೆದ ಡಿವೈನ್‌ ಸ್ಟಾರ್!‌

ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಟನೆ, ನಿರ್ದೇಶನ ಕಾಂತಾರ ಚಾಪ್ಟರ್‌ 1 ಸಿನಿಮಾ ರಿಲೀಸ್‌ ಆಗಿದ್ದು, ತೆರೆ ಮೇಲೆ ಅಬ್ಬರಿಸ್ತಿದೆ. ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಕಲೆಕ್ಷನ್‌ ಮಾಡಿದ್ದು, ದಾಖಲೆ ಬರೆಯುತ್ತಿದೆ. ಕಾಂತಾರ ಚಾಪ್ಟರ್‌ 1 ನಿಂದ ಬಿಗ್‌ ಸಕ್ಸಸ್‌ ಸಿಗ್ತಿದ್ದಂತೆ ರಿಷಭ್‌ ಶೆಟ್ಟಿ ಟೆಂಪಲ್‌ ರನ್‌ ಶುರುಮಾಡಿದ್ದಾರೆ. ಇಂದು ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್  ಮನೆಗೆ ಬಾಂಬ್ ಬೆದರಿಕೆ

ನಟ ರಿಷಬ್‌ ಶೆಟ್ಟಿ ದಂಪತಿ ಟೆಂಪಲ್‌ ರನ್‌ ಶುರುಮಾಡಿದ್ದಾರೆ. ಸಿನಿಮಾ ರಿಲೀಸ್‌ ಗೂ ಮುನ್ನವೇ ರಿಷಬ್‌ ಶೆಟ್ಟಿ ದಂಪತಿ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದಿದ್ರು. ಇತ್ತೀಚೆಗೆ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದ ಅವರು ಈಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟಿದ್ದಾರೆ. ಚಾಮುಂಡೇಶ್ವರಿಯ ದರ್ಶನ ಪಡೆದ ರಿಷಬ್‌ ಶೆಟ್ಟಿ ದಂಪತಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ರಿಷಬ್‌, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ ರೀತಿ ಈ ಬಾರಿಯೂ ಇನ್ನೊಂದು ಚಾಪ್ಟರ್ ಜನರಿಗೆ ತಲುಪಿರುವ ರೀತಿ ಹಾಗೂ ಅವರು ಒಪ್ಪಿಕೊಂಡಿರುವ ರೀತಿ ತುಂಬಾ ಖುಷಿಯಾಗಿದೆ ಎಂದು ತಿಳಿಸಿದರು.

ದೈವದ ರೀತಿ ಚಿತ್ರ ಮಂದಿರದ ಮುಂದೆ ನಟನೆ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ್ದು, ಯಾರು ಕೂಡ ದೈವದ ರೀತಿ ನಟನೆ ಮಾಡಬಾರದು. ಶ್ರದ್ಧೆ ಭಕ್ತಿಯಿಂದ ಸಿನಿಮಾ ಮಾಡಿರುತ್ತೇವೆ. ಇದರಿಂದ ನನಗೂ ಸಹ ಬೇಜರಾಗಿದೆ. ಯಾರೂ ಕೂಡ ಈ ರೀತಿ ಮಾಡಬೇಡಿ. ಇದರಿಂದ ಬೇಸರವಾಗುತ್ತೆ ಎಂದರಲ್ಲದೇ ಲೆಕ್ಕಚಾರದ ವಿಚಾರವಾಗಿ ನಾನು ಮಾತನಾಡುವುದಿಲ್ಲ. ನಾನು ಸಿನಿಮಾ ಡೈರೆಕ್ಟರ್ ಅಷ್ಟೇ. ನಿರ್ಮಾಪಕ ವಿಜಯ್‌ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ರಿಷಬ್ ಶೆಟ್ಟಿ ತಿಳಿಸಿದರು.  ಇನ್ನು ರಿಷಬ್‌ ಶೆಟ್ಟಿ ದಂಪತಿ ಚಾಮುಂಡಿ ಬೆಟ್ಟದಿಂದ ನಂಜನಗೂಡಿಗೆ ಭೇಟಿ ನೀಡಿ ಶ್ರೀಕಂಠೇಶ್ವರ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸಂಜೆ 4ಗಂಟೆಗೆ ಮೈಸೂರಿನ ಗಾಯತ್ರಿ ಚಿತ್ರಮಂದಿರಕ್ಕೆ ಭೇಟಿ ನೀಡಲಿದ್ದಾರೆ.

Shwetha M