ಕಾಪು ಲೀಲಾಧರ ಶೆಟ್ಟಿ, ವಸುಂದರಾ ಶೆಟ್ಟಿ ದಂಪತಿ ದುರಂತ ಅಂತ್ಯ – ಜೊತೆಯಲ್ಲೇ ನೇಣಿಗೆ ಶರಣಾದ ದಂಪತಿ

ಕಾಪು ಲೀಲಾಧರ ಶೆಟ್ಟಿ, ವಸುಂದರಾ ಶೆಟ್ಟಿ ದಂಪತಿ ದುರಂತ ಅಂತ್ಯ – ಜೊತೆಯಲ್ಲೇ ನೇಣಿಗೆ ಶರಣಾದ ದಂಪತಿ

ಸಮಾಜಸೇವೆ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಕಾಪು ತಾಲೂಕಿನಾದ್ಯಂತ ಭಾರೀ ಹೆಸರು ಗಳಿಸಿದ್ದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂದರಾ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಪುವಿನಲ್ಲಿರುವ ಅವರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದಾರೆ.

ಇದನ್ನೂ ಓದಿ: ಶಬರಿಮಲೆ ದೇಗುಲದಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ – ಜನಸಂದಣಿ ನಿರ್ವಹಣೆಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಲೀಲಾಧರ ಶೆಟ್ಟಿಯವರು ರಂಗಕರ್ಮಿಯಾಗಿದ್ದು, ರಂಗತರಂಗ ನಾಟಕ ತಂಡವನ್ನು ಬೆಳೆಸಿದ್ದರು. ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಹ ಸ್ಪರ್ಧಿಸಿದ್ದರು. ದಂಪತಿ ಕೌಟುಂಬಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿ.12ರಂದು ರಾತ್ರಿ ಇಬ್ಬರೂ ಜೊತೆಯಾಗಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಪುವಿನಲ್ಲಿರುವ ಅವರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದಾರೆ.  ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ರಂಗಕರ್ಮಿಯಾಗಿ ಭಾರೀ ಜನಪ್ರಿಯತೆ ಪಡೆದಿದ್ದರು. ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅತ್ಯಂತ ಆಪ್ತರು ಆಗಿದ್ದರು. ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕರೂ ಆಗಿದ್ದರು. ಇತ್ತೀಚೆಗೆ ತನ್ನ ಹೊಸ ನಾಟಕ ರಚನೆಯನ್ನು ಮಾಡಿದ್ದ ಅವರು ಅದರಲ್ಲಿ ಯಶಸ್ವಿಯಾಗುವ ಆಶಾಭಾವನೆ ಹೊಂದಿದ್ದರು. ಕಾಪುವಿನಲ್ಲಿರುವ ಅವರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದು, ದಂಪತಿ ಸಮಾಜ ಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಬಹಳ ಸಕ್ರೀಯರಾಗಿದ್ದರು. ಲೀಲಾಧರ ಶೆಟ್ಟಿಯವರು ರಂಗಕರ್ಮಿಯಾಗಿದ್ದು, ರಂಗತರಂಗ ನಾಟಕ ತಂಡದವನ್ನು ಬೆಳೆಸಿದ್ದರು. ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಹ ಸ್ಪರ್ಧಿಸಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಅತ್ಯಂತ ಆಪ್ತರಾಗಿದ್ದ ಲೀಲಾಧರ ಶೆಟ್ಟಿ ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು. ದಂಪತಿ ಕೌಟುಂಬಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sulekha