ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.. – ದಕ್ಷಿಣ ಕನ್ನಡ ಪ್ರಥಮ ಸ್ಥಾನ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..  – ದಕ್ಷಿಣ ಕನ್ನಡ ಪ್ರಥಮ ಸ್ಥಾನ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶೇ.81.15 ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್‌ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ.

ಇದನ್ನೂ ಓದಿ: ಕಂದಕಕ್ಕೆ ಉರುಳಿ ಬಿದ್ದ ಬಸ್‌ – 12 ಮಂದಿ ದುರ್ಮರಣ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.

ವಿಜ್ಞಾನ ವಿಭಾಗದಲ್ಲಿ  ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ನೂತನ 595 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.  ಕಲಾ ವಿಭಾಗದಲ್ಲಿ ಮೇಧಾ  596 ಅಂಕ ಗಳಿಸಿ ಮೊದಲ ಸ್ಥಾನ ಗಳಿಸಿದ್ದಾರೆ.  ವಾಣಿಜ್ಯ ವಿಭಾಗದಲ್ಲಿ ವಿಧ್ಯಾನಿಧಿ IND ಪಿಯು ಕಾಲೇಜಿನ  ಜ್ಞಾನವಿ 597 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.  ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

Shwetha M