ವಿಧಾನಸಭೆ ಅಧಿವೇಶನದಲ್ಲಿ ಭಾರೀ ಹೈಡ್ರಾಮಾ – ಭಾಷಣ ಓದದೇ ತೆರಳಿದ ಗೆಹ್ಲೋಟ್

ರಾಜ್ಯ ವಿಧಾನಸಭೆ–ವಿಧಾನಪರಿಷತ್ ಜಂಟಿ ವಿಶೇಷ ಅಧಿವೇಶನದಲ್ಲಿ ಇಂದಿನಿಂದ ಆರಂಭವಾಗಿದೆ. ವಿಶೇಷ ಅಧಿವೇಶನದಲ್ಲಿ ದೊಡ್ಡ ಹೈಡ್ರಾಮಾ ನಡೆದಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯಪಾಲರು ಅಧಿವೇಶನಕ್ಕೆ ಆರಂಭಿಸಿ ಆರಂಭಿಕ ಸಾಲನ್ನು ಹೇಳಿ ಸದನದಿಂದ ಹೊರ ನಡೆದಿದ್ದಾರೆ.
ಇದನ್ನೂ ಓದಿ: ಬೈಕ್ ಶೋರೂಂ ಅಗ್ನಿ ಅವಘಡ! – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ!
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ವಿಧಾನಸಭೆ–ವಿಧಾನಪರಿಷತ್ ಜಂಟಿ ವಿಶೇಷ ಅಧಿವೇಶನಕ್ಕೆ ಆಗಮಿಸಿದ್ದರು. ಆದರೆ ಸರ್ಕಾರದ ಭಾಷಣಕ್ಕೆ ರಾಜ್ಯಪಾಲರು ವಿರೋಧ ವ್ಯಕ್ತ ಪಡಿಸಿದ್ದು, ಕೇವಲ ಎರಡೇ ಸಾಲಿನಲ್ಲಿ ಭಾಷಣ ಮುಗಿಸಿದ್ದಾರೆ. “ನನ್ನ ಸರ್ಕಾರವು ರಾಜ್ಯದ ಅರ್ಥಿಕ, ಸಾಮಾಜಿಕ, ಭೌತಿಕ ಅಭಿವೃದ್ಧಿಯನ್ನು ದ್ವಿಗುಣ ಮಾಡಲು ಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ” ಎಂದಷ್ಟೇ ಹೇಳಿ, ಸದನದಿಂದ ತೆರಳಿದ್ದಾರೆ.
ರಾಜ್ಯಪಾಲರು ಭಾಷಣ ಪೀಠದಿಂದ ಕೆಳಗಿಳಿದು ಬರುತ್ತಿದ್ದಂತೆ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ರಾಜ್ಯಪಾಲರಿಗೆ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ಮೊದಲ ಬಾರಿಗೆ ರಾಜ್ಯದ ಅಧಿವೇಶನ ಇತಿಹಾಸದಲ್ಲಿ ರಾಜ್ಯಪಾಲರು ಭಾಷಣ ಓದದೇ ತೆರಳಿದ್ದಾರೆ. ಇದೀಗ ಸದನವನ್ನು ಮುಂದೂಡಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೇ ಸಂವಿಧಾನದ ವಿಧಿಯನ್ನ ಉಲ್ಲಂಘನೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೋಡಿರಿ

