ಕರ್ನಾಟಕ ವಿಧಾನಸಭಾ ಚುನಾವಣೆ – 4 ದಿನ ಮದ್ಯ ಮಾರಾಟ ಮತ್ತು ಸಾಗಾಣಿಕೆ ಬಂದ್  

ಕರ್ನಾಟಕ ವಿಧಾನಸಭಾ ಚುನಾವಣೆ – 4 ದಿನ ಮದ್ಯ ಮಾರಾಟ ಮತ್ತು ಸಾಗಾಣಿಕೆ ಬಂದ್  

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರದಿಂದ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮದ್ಯಕ್ಕೆ ಭಾರಿ ಬೇಡಿಕೆ ಹೆಚ್ಚಾಗಿದೆ.

ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮುನ್ನ ಅವಧಿಯಲ್ಲಿಅಂದರೆ, ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಸ್ಕೂಟರ್‌ನಲ್ಲಿ ಡೆಲಿವರಿ ಬಾಯ್ ಜೊತೆ ಸಂಚಾರ – ಗ್ರಾಹಕರ ಜೊತೆ ಕುಳಿತು ಕಾಫಿ ಕುಡಿದ ರಾಹುಲ್ ಗಾಂಧಿ

ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಸೋಮವಾರ ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಬಂದ್ ಎಂದು ಘೋಷಣೆಯಾಗುತ್ತಿದ್ದಂತೆ ರಾಜ್ಯದ ಮದ್ಯ ಮಾರಾಟ ಮಳಿಗೆಗಳಲ್ಲಿ ಮಧ್ಯ ಖರೀದಿ ಭರಾಟೆ ಜೋರಾಗಿಯೇ ಇತ್ತು. ಹಲವೆಡೆ ಅಧಿಕ ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ ಅನ್ನೋ ಆರೋಪಗಳು ಕೂಡ ಕೇಳಿಬಂದಿತ್ತು.

ಮೇ 13 ರಂದು ರಾಜ್ಯದಲ್ಲಿ ಮತ ಎಣಿಕೆ ನಡೆಯಲಿದ್ದು ಆ ದಿನದಂದು ಕೂಡ ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣೆಗೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್‌ ಆಗಲಿವೆ. ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗವು ರಾಜ್ಯ ಸರಕಾರಕ್ಕೆ ಬರೆದು ಸೂಚನೆ ನೀಡಿತ್ತು.

suddiyaana