ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್ – ಬಿಕೋ ಎನ್ನುತ್ತಿದೆ ಬಸ್ ನಿಲ್ದಾಣಗಳು!

ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಇದ್ದರೂ ಜನಜೀವನ ಯಥಾಸ್ಥಿತಿಯಲ್ಲಿದೆ.
ಇದನ್ನೂ ಓದಿ: ಐಪಿಎಲ್ ಮೊದಲ ಪಂದ್ಯದಲ್ಲೇ ಫ್ಯಾನ್ಸ್‌ಗೆ ನಿರಾಸೆ –RCB Vs KKR ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿವೆ. ನಗರದ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣ ಯಥಾಸ್ಥಿತಿಯಲ್ಲಿದೆ. ಆದರೆ ಪ್ರಯಾಣಿಕರ ಸಂಖ್ಯೆ ಸ್ಪಲ್ಪ ಕಡಿಮೆಯಾಗಿದೆ. ಇನ್ನು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಬಂದ್ ಬಿಸಿ ತಟ್ಟಿದೆ. ತಮ್ಮ ತಮ್ಮ ಊರುಗಳಿಗೆ ವೀಕೆಂಡ್‌ಗಳಲ್ಲೇ ಹೆಚ್ಚಾಗಿ ಹೋಗುವ ಜನ ಇಂದು ಬಂದ್ ಕಾರಣಕ್ಕೆ ಸ್ಯಾಟಲೈಟ್ ಬಸ್ ನಿಲ್ದಾಣದ ಕಡೆ ಮುಖ ಮಾಡಿಲ್ಲ. ಸ್ಯಾಟಲೈಟ್ ಕೆಎಸ್‌ಆರ್‌ಟಿಸಿ ನಿಲ್ದಾಣ ಇಂದು ಪ್ರಯಾಣಿಕರ ಕೊರತೆ ಎದುರಿಸುತ್ತಿದೆ.
ರಾಮನಗರ, ಮೈಸೂರು, ಮದ್ದೂರು, ಮಂಡ್ಯ, ಚಾಮರಾಜನಗರ, ಕೊಳ್ಳೇಗಾಲ, ಟಿ.ನರಸೀಪುರ, ನಂಜನಗೂಡು, ಮಳವಳ್ಳಿ, ಕೊಡಗು, ಹಾಸನ ಭಾಗಕ್ಕೆ ಹೋಗುವವರು ಬಹಳಷ್ಟು ಜನ ಬಂದ್ ಅಂತ ಇಂದು ಮನೆಗಳಲ್ಲೇ ಉಳಿದುಕೊಂಡಿದ್ದಾರೆ. ಇದರ ಪರಿಣಾಮ ಬಸ್‌ಗಳು ಖಾಲಿ ಖಾಲಿ ಸಂಚಾರ ಮಾಡುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಖ್ಯೆ, ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಬಸ್‌ಗಳಿದ್ದರೂ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ.