ಪ್ರಚೋದನಕಾರಿ ಹೇಳಿಕೆ – ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು

ಪ್ರಚೋದನಕಾರಿ ಹೇಳಿಕೆ – ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಇದನ್ನೂ ಓದಿ: ವನ್ಯಜೀವಿಗಳ ಅಂಗಾಂಗ ಸರ್ಕಾರಕ್ಕೆ ಹಿಂದಿರುಗಿಸಲು ಏಪ್ರಿಲ್‌ 10 ಕೊನೆ ದಿನ!                   

ಫೆಬ್ರವರಿ 08 ರಂದು ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಕೆಎಸ್​ ಈಶ್ವರಪ್ಪ “ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದರು. ನಾವು ಹೀಗೆ ಬಿಡಲ್ಲ. ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ ಎಂದಿದ್ದರು. ಈ ಹೇಳಿಕೆ ಸಂಬಂಧ ಕೆ.ಎಸ್​.ಈಶ್ವರಪ್ಪ ವಿರುದ್ಧ ಆರ್‌ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.

ದೂರ ದಾಖಲಾದ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸರು ಕೆಎಸ್​ ಈಶ್ವರಪ್ಪ ಅವರಿಗೆ ನೋಟಿಸ್​ ಜಾರಿ ಮಾಡಿದ್ದಾರೆ. ಅಲ್ಲದೆ ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿರುವ ಕೆಎಸ್​ ಈಶ್ವರಪ್ಪ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಬೆಂಗಳೂರಿನ ಚಕ್ರವರ್ತಿ ಬಡಾವಣೆಯಲ್ಲಿರುವ ಕೆ.ಎಸ್​.ಈಶ್ವರಪ್ಪ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು. ಇದೀಗ ಕೆಎಸ್​ ಈಶ್ವರಪ್ಪ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

 

Shwetha M