ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
ಉತ್ತರ ಕನ್ನಡ ಜಿಲ್ಲೆಗೆ ಕೊನೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಉತ್ತರ ಕನ್ನಡ ಜಿಲ್ಲೆಗೆ ಕೊನೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್​​​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇದಲ್ಲದೇ, ಕಾಡಾನೆ ಹಾವಳಿ ತಡೆಗೆ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ರಚಿಸಿರುವ ಕಾಡಾನೆ ಕಾರ್ಯಪಡೆಯನ್ನು ಮೈಸೂರು ಹಾಗೂ ಮಂಡ್ಯಕ್ಕೂ ವಿಸ್ತರಿಸಿ ಹೊಸದಾಗಿ 199 ಸಿಬ್ಬಂದಿ ನೇಮಕಾತಿಗೆ ನಿರ್ಧರಿಸಲಾಗಿದೆ. ಪ್ರಸಕ್ತ ವರ್ಷ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜತೆಗೆ ಪ್ರಸಕ್ತ ವರ್ಷದಲ್ಲಿ ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಸ್ಥಾಪಿಸಲಾಗುವುದು.

suddiyaana