ರಾಜ್ಯ ಬಜೆಟ್ ಮಂಡನೆ ಮುಕ್ತಾಯ –  3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯ ಬಜೆಟ್ ಮಂಡನೆ ಮುಕ್ತಾಯ –  3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಿಎಂ  ಸಿದ್ದರಾಮಯ್ಯ ಅವರು ಸುಮಾರು 3 ಗಂಟೆ 40 ನಿಮಿಷಗಳ ಸುದೀರ್ಘ ಭಾಷಣ ಮಂಡಿಸಿದ್ದಾರೆ. ಈ ಮೂಲಕ ರಾಜ್ಯದ ಇತಿಹಾಸದಲ್ಲೇ ಅತಿ ದೀರ್ಘಕಾಲದ ಬಜೆಟ್ ಭಾಷಣ ದಾಖಲೆಯನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಬುಮ್ರಾ ಬೌಲ್.. ಅಕ್ಷರ್ ಕ್ಯಾಚ್ – ಆಂಗ್ಲರಿಗೆ ಮುಳುವಾಗಿದ್ದೇ ಸಂಜು ರನ್ಸ್

ವಿಧಾನಸಭೆಯಲ್ಲಿ ಬಜೆಟ್ ಮಂಡನೆಯ ಸಮಯದಲ್ಲಿ ಸಿದ್ದರಾಮಯ್ಯ ಅವರು ಚೇರ್ ಮೇಲೆ ಕೂರದೆಯೇ ನಿಂತು ಭಾಷಣ ಮಾಡಿದರು. ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಯ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ರಾಜ್ಯದ ಆರ್ಥಿಕತೆಗೆ ಹೊಸ ದಿಕ್ಕು ನೀಡುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ವಾದಿಸಿದೆ.

ಇನ್ನು ಸಿಎಂ ಬಜೆಟ್ ಭಾಷಣ ಮುಗಿಯುತ್ತಿದ್ದಂತೆ ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಸಿಎಂಗೆ ಜೋರಾಗಿ ಚಪ್ಪಾಳೆ ತಟ್ಟಿದ್ದಾರೆ. ಬಳಿಕ ವಿರೋಧ ಪಕ್ಷದ ಪ್ರತಿಕ್ರಿಯೆ ಬಜೆಟ್ ಮಂಡನೆಯ ಸಮಯದಲ್ಲಿ ಬಿಜೆಪಿ ಸದಸ್ಯರು ಬಜೆಟ್‌ನಲ್ಲಿ ಏನಿಲ್ಲ.. ಚೊಂಬೋ ಚೊಂಬು ಎಂದು ಕೂಗಿದರು. ಆದರೆ ಬಜೆಟ್ ಮುಗಿದ ನಂತರ ಬಿಜೆಪಿ ಸದಸ್ಯರು ಗೋವಿಂದ ಗೋವಿಂದ ಎಂದು ಕೂಗಿ ಸಿಎಂಗೆ ಗೌರವ ಸಲ್ಲಿಸಿದ್ದು ಗಮನಾರ್ಹವಾಯಿತು.

ಪ್ರಸಕ್ತ ಸಾಲಿನ ಬಜೆಟ್ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತಾಯಗೊಳಿಸಿದ ಬಳಿಕ ಮಾತನಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದರು.

Shwetha M

Leave a Reply

Your email address will not be published. Required fields are marked *