ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆ ಮತ ಎಣಿಕೆ – ಮೊದಲ ಸುತ್ತಿನಲ್ಲಿ ಕಾಂಗ್ರೆಸ್ 2, ಎನ್‌ಡಿಎ 1 ಕ್ಷೇತ್ರದಲ್ಲಿ ಮುನ್ನಡೆ

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆಯ ಕುತೂಹಲಕ್ಕೆ ಶನಿವಾರ ಅಂತಿಮ ತೆರೆ ಬೀಳಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.
ಇದನ್ನೂ ಓದಿ: ಜಮೀರ್‌ಗೆ ಚನ್ನಪಟ್ಟಣದ ರಿಸಲ್ಟ್ ಟೆನ್ಶನ್ – ನಿಖಿಲ್ ಗೆದ್ರೆ ಸಚಿವ ಸ್ಥಾನ ಖತಂ!?
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಮುನ್ನಡೆ ಸಾಧಿಸಿದ್ದರೆ, ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಸಾಧಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಗೆಲ್ಲೋದು ಯಾರು ಎನ್ನುವ ಬಗ್ಗೆ ಒಂದು ಪಿಚ್ಚರ್ ಸಿಗಲಿದೆ.
ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಮತಎಣಿಕೆ ನಡೆಯುತ್ತಿದ್ದರೆ ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರು ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣದಲ್ಲಿ ಸೋತರೇ ನಾನೇ ಸೋತಂತೆ ಎಂದು ಹೇಳಿಬಿಟ್ಟಿದ್ದಾರೆ. ಇದೇ ವೇಳೆ, ಕುಮಾರಸ್ವಾಮಿ ಸಹ ಪುತ್ರನ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೇ 3 ಕ್ಷೇತ್ರ ಗೆಲ್ಲುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ.