ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಬಂಪರ್‌! – 5 ಕೆಜಿ ಅಕ್ಕಿ ಜೊತೆಗೆ ಮತ್ತೆ 5 ಕೆಜಿಗೆ ಹಣ ನೀಡಲು ನಿರ್ಧಾರ

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಬಂಪರ್‌! – 5 ಕೆಜಿ ಅಕ್ಕಿ ಜೊತೆಗೆ ಮತ್ತೆ 5 ಕೆಜಿಗೆ ಹಣ ನೀಡಲು ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ 5 ಗ್ಯಾರಂಟಿಗಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಸಾಕಷ್ಟು ಅಡೆತಡೆಗಳು ಉಂಟಾಗಿದೆ. ಅನ್ನಭಾಗ್ಯ ಯೋಜನೆಯ ಮೂಲಕ ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಕೊಡಲು ಮುಂದಾಗಿದೆ. ಆದರೆ ಹೆಚ್ಚುವರಿ ಅಕ್ಕಿ ಇಲ್ಲದ ಕಾರಣ ಈ ಯೋಜನೆಗೆ ತೊಡಕು ಉಂಟಾಗಿದೆ. ಇದೀಗ ಸರ್ಕಾರ ಅನ್ನಭಾಗ್ಯ ಯೋಜನೆಗೆ ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ.

ಇದನ್ನೂ ಓದಿ: ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್‌ – ಯೋಜನೆಯ ಪ್ರತ್ಯೇಕ ಆ್ಯಪ್‍ಗೆ ಗ್ರೀನ್‌ ಸಿಗ್ನಲ್‌!

ಚುನಾವಣಾ ಸಂದರ್ಭದಲ್ಲಿ ಪ್ರತಿ ಬಿಪಿಎಲ್‌ ಕಾರ್ಡುದಾರರಿಗೂ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ರಾಜ್ಯ ಸರ್ಕಾರ ಗ್ಯಾರಂಟಿ ನೀಡಿತ್ತು. ಆದರೆ, ಸದ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗದ ಕಾರಣ 5 ಕೆಜಿ ಅಕ್ಕಿಯ ಜತೆಗೆ ಹಣ ನೀಡಲು ಸರ್ಕಾರ ತೀರ್ಮಾನಿಸಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.

ಬಿಪಿಎಲ್‌ ಪಡಿತರದಾರರಿಗೆ 5 ಕೆಜಿ ಅಕ್ಕಿಯ ಜತೆಗೆ ತಲಾ 1 ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಜುಲೈ 1 ರಿಂದಲೇ ಇದು ಜಾರಿಗೆ ಬರಲಿದೆ. ಬಿಪಿಎಲ್‌ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಈ ಹಣ ಜಮೆಯಾಗಲಿದೆ. ಅಕ್ಕಿ ದಾಸ್ತಾನು ಆಗುವವರೆಗೂ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.

ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಣ ಜಟಾಪಟಿಗೂ ಕಾರಣವಾಗಿತ್ತು. ಇದೀಗ ಹೆಚ್ಚುವರಿ ಅಕ್ಕಿ ಬದಲು ಹಣ ನೀಡಲು ಸರ್ಕಾರ ತೀರ್ಮಾನಿಸಿದೆ.

suddiyaana